ಬೇಸಿಗೆಯಲ್ಲಿ ಎಲ್ಲಾ ಕಡೆಗಳಲ್ಲೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಯಾಗಲಿ: ನಿತೀಶ್ ಕೆ
ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ಬೇಸಿಗೆ ಆಗಮನದ ಹಿನ್ನೆಲೆಯಲ್ಲಿ ಈಗಾಗಲೇ ಬಿಸಿಲು ಏರಲಾರಂಭಿಸಿದೆ. ಆದ್ದರಿಂದ ರಾಯಚೂರು ಜಿಲ್ಲೆಯಲ್ಲಿ ಮುಂಬರುವ ಬೇಸಿಗೆಯ ಸಮಯದಲ್ಲಿ ಸಮರ್ಪಕವಾದ ಕುಡಿಯುವ ನೀರಿನ ವ್ಯವಸ್ಥೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು…
