ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಶ್ಲಾಘನೀಯ- ಸಚಿವ ಎನ್ ಎಸ್ ಬೋಸರಾಜು
ಸ್ಕೌಟ್ಸ್ ಮತ್ತು ಗೈಡ್ಸ್ ಶಿಸ್ತು ಶಾಂತಿಯ ಸಂಕೇತ- ಎನ್ಎಸ್ ಬೋಸರಾಜು
ರಾಯಚೂರಿನ ಜಿಲ್ಲಾ ಸ್ಕೌಟ್ ಭವನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದ ಅಡಿಯಲ್ಲಿ ನಿರ್ಮಿಸಲಾದ ಜಿಲ್ಲಾ ನೂತನ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದ ನೂತನ ಕಟ್ಟಡವನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಲೋಕಾರ್ಪಣೆಗೊಳಿಸಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಇಂದಿನ ಯುವಕರಲ್ಲಿ ಶಿಸ್ತು ಆತ್ಮವಿಶ್ವಾಸ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಶಾಂತಿ ಸೌಹಾರ್ದತೆಯೊಂದಿಗೆ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಯುವಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಈ ಸಂಸ್ಥೆಯಿಂದ ಮಾಡಲಾಗುತ್ತಿದೆ. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಈ ಸೇವೆ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ಮುಖ್ಯಸ್ಥರಾದ ಪಿಜಿಆರ್ ಸಿಂಧೆ ಕಾಂಗ್ರೆಸ್ ಮುಖಂಡರಾದ ಜಯಣ್ಣ ಜಯವಂತರಾವ್ ಪತಂಗೆ ಶಿವ ಮೂರ್ತಿ ರುದ್ರಪ್ಪ ಅಂಗಡಿ ಬಸವರಾಜ ಪಾಟೀಲ್ ಪ್ರಭಾಕರ್ ಭಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


