ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ರಾಯಚುರು ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕಕ್ಕೆ ಸಂಯೋಜನೆಗೊಳಪಟ್ಟಿರುವ ಕಾಳೇಜುಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ದಿಶಾಭೋದ್ ಪೌಂಢೇಶನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇವರ ಸಹಯೋಗದೊಂದಿಗೆ ಸ್ವಾಸ್ಥ್ಯಂ ಭಾರತ, ಶ್ರೇಷ್ಠ ಭಾರತ, ಯುವ ಶುದ್ಧಿ ಅಭಿಯಾನ ಅಂಗವಾಗಿ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಅಭಿಯಾನ ಮತ್ತು ವಾಕಥಾನ್‌ಗೆ ಮಾರ್ಚ್ 6ರ ಬೆಳಿಗ್ಗೆ 7.30ಕ್ಕೆ ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಚಾಲನೆ ನೀಡುವರು.
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ 108 ಶ್ರೀ ಸುಬುಧೇಂದ್ರ ತೀರ್ಥರು ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಧ್ವಜಾರೋಹಣ ನೆರವೇರಿಸುವರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಬಿ.ಸಿ.ಭಗವಾನ್ ಅವರು ಪ್ರತಿಜ್ಞಾವಿಧಿ ಬೋಧನೆ ಮತ್ತು ದಿಕ್ಸೂಚಿ ಭಾಷಣ ನೀಡಲಿದ್ದಾರೆ. ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಹಾಗೂ ಬೀಳಗಿ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್ ಬಿ.ಪಾಟೀಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಭಾರತ ಸರ್ಕಾರದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿರೀಕ್ಷಕರಾದ ವಿಕಾಸ್ ಸಿಂಗ್, ದಿಶಾಭೋದ್ ಪೌಂಡೇಶನ್ ಡಾ.ಹರ್ಷ ಹರ್ದಾರ್, ಎಸ್.ಪಿ.ಚಿದಾನಂದ್ ಸೇರಿದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕಾರಿಗಳು, ಸಿಬ್ಬಂದಿಗಳ ವರ್ಗ, ಸೆನೆಟ್, ಸಿಂಡಿಕೇಟ್, ಅಕೆಡೆಮಿಕಲ್ ಕೌನ್ಸಿಲ್ ಸದಸ್ಯರು ಹಾಗೂ ರಾಯಚೂರು ಜಿಲ್ಲಾ ವ್ಯಾಪ್ತಿಯ ವಿಶ್ವವಿದ್ಯಾಲಯದ ಸಂಯೋಜನೆಗೊಳಪಟ್ಟಿರುವ ಕಾಲೇಜುಗಳ ಆಡಳಿತ ಮಂಡಳಿ, ಅಧ್ಯಕ್ಷರು, ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Leave a Reply

Your email address will not be published. Required fields are marked *