ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಯಚೂರು ಜಿಲ್ಲಾ ವಕೀಲರ ಸಂಘ ಹಾಗೂ ಗ್ರಾಮ ಪಂಚಾಯತ್ ಜಾಗೀರ ವೆಂಕಟಾಪುರ ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಹಾಗೂ ನನಗೂ ಹಕ್ಕಿದೆ ಎಂಬ ಕಿರು ನಾಟಕ ಪ್ರದರ್ಶನವನ್ನು ತಾಲೂಕಿನ ಜಾಗೀರ ವೆಂಕಟಾಪುರ ಗ್ರಾಮದಲ್ಲಿ ಮಾರ್ಚ್ 7ರ ಸಂಜೆ 6.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ
ಗೌರವಾನ್ವಿತ ಶ್ರೀ.ಮಾರುತಿ ಎಸ್. ಬಾಗಡೆ ಅವರು ಉದ್ಘಾಟನೆ ನೆರವೇರಿಸುವರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ.ಮಹಾವರಕರ್ ಗುಲ್ಜರ್‌ಲಾಲ್, ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ.ಶ್ರೀಕಾಂತ್.ಎಸ್.ವಿ., 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಹತ್ತಿಕಾಳ್ ಪ್ರಭು ಸಿದ್ದಪ್ಪ, ಪ್ರಧಾನ ಹಿರಿಯ ವ್ಯವಹಾರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಸಿದ್ದರಾಮಪ್ಪ ಕಲ್ಯಾಣರಾವ್, ಅಪರ ಹಿರಿಯ ವ್ಯವಹಾರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಸುದೀನ್ ಕುಮಾರ್ ಡಿ.ಜಿ., 2ನೇ ಹೆಚ್ಚುವರಿ ಹಿರಿಯ ಶ್ರೇಣಿ ವ್ಯವಹಾರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀಮತಿ ಶ್ವೇತಾ ಸಿಂಗ್, ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಶ್ರೀ ಹೆಚ್.ಎ.ಸಾತ್ವಿಕ್, 3ನೇ ಅಪರ ಹಿರಿಯ ವ್ಯವಹಾರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀಮತಿ ಕೃಪಾ, ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರಾದ ಗೌರವಾನ್ವಿತ ಚನ್ನಬಸಪ್ಪ ಆರ್. ಕೂಡಿ, ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಕಾಶ ಡಂಬಳ, ಜಾಗೀರ್ ವೆಂಕಟಪೂರ್ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಗಳಾದ ಮನ್ಸುರ್, ಪಿಡಿಒ ಲಕ್ಷ್ಮೀ ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *