ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ವಿಕಲಚೇತನರಿಗೆ ಸಂಬಂಧಪಟ್ಟ ಚಟುವಟಿಕೆಗಳು/ ಕೇಂದ್ರಗಳಾದ ವಿಶೇಷ ಶಾಲೆಗಳು, ಫಿಜಿಯೋ ಥೆರಪಿ ಕೇಂದ್ರಗಳು, ತರಬೇತಿ ಕೇಂದ್ರಗಳು, ವಸತಿ ನಿಲಯಗಳು ಸೇರಿದಂತೆ ಇನ್ನಿತರ ಕೇಂದ್ರಗಳನ್ನು ನಡೆಸುತ್ತಿರುವ ಸಂಸ್ಥೆಗಳು ವಿಕಲಚೇತನರ ಹಕ್ಕುಗಳ ಅಧಿನಿಯಮ ಕಾಯ್ದೆ 2016ರಡಿ ಕಡ್ಡಾಯವಾಗಿ ಸೇವಾ ಸಿಂಧು ಆನ್‌ಲೈನ್ ತಂತ್ರಾಂಶದಿಂದ ನೋಂದಣಿ ಮಾಡಿಕೊಳ್ಳಬೇಕೆಂದು ಕೋರಲಾಗಿದೆ.
ಹಿರಿಯ ನಾಗರಿಕರಿಗೆ ಸಂಬಂಧಪಟ್ಟ ಚಟುವಟಿಕೆಗಳು/ ಕೇಂದ್ರಗಳನ್ನು ನಡೆಸುತ್ತಿರುವ ಸಂಸ್ಥೆಗಳು ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆ 2007ರಡಿ ಕಡ್ಡಾಯವಾಗಿ ಸೇವಾ ಸಿಂಧು ಆನ್‌ಲೈನ್ ತಂತ್ರಾಂಶದಿಂದ ನೋಂದಣಿ ಮಾಡಿಕೊಳ್ಳತಕ್ಕದ್ದು. ಈ ಕಾಯ್ದೆಗಳನ್ವಯ ನೋಂದಣಿ ಮಾಡಿಸಿಕೊಳ್ಳದೇ ಇದ್ದಲ್ಲಿ ಅಂತಹ ಸಂಸ್ಥೆಗಳ ಮೇಲೆ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, # 1-3-1411/4, ಆಶಾಪೂರ್ ರಸ್ತೆ, ಆಫೀರ‍್ಸ್ ಕಾಲೋನಿ ಎದುರುಗಡೆ ಶ್ರೀರಾಜಮಾತಾ ಗುಡಿ ಹತ್ತಿರ, ರಾಯಚೂರಿಗೆ ಭೇಟಿ ನೀಡಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ:-08532 200992ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *