ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯನ್ನು ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ: www.dpl.karnataka.gov.in ನಲ್ಲಿ ಮಾರ್ಚ್ 02 ರಂದು ಪ್ರಕಟಿಸಲಾಗಿದೆ.
ಆಯ್ಕೆಯಾದ ಪುಸ್ತಕಗಳ ಪಟ್ಟಿಯಲ್ಲಿರುವ ಲೇಖಕರು, ಲೇಖಕ – ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ತಮ್ಮ ಪುಸ್ತಕಗಳಿಗೆ ಸಂಬಂಧಿಸಿದ ಪುಸ್ತಕದ ಶೀರ್ಷಿಕೆ, ಲೇಖಕರ, ಪ್ರಕಾಶಕರ ಹೆಸರು, ಮುಖ ಬೆಲೆ (ನಿಗದಿತ ಬೆಲೆಯಲ್ಲಿ ವ್ಯತ್ಯಾಸವಿದ್ದಲ್ಲಿ), ಪುಸ್ತಕದ ಅಳತೆ ಮತ್ತು ಪುಟಗಳ ಸಂಖ್ಯೆ ಅಥವಾ ಇತರ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ತಮ್ಮ ಆಕ್ಷೇಪಣೆ ಅಥವಾ ತಿದ್ದುಪಡಿಗಳನ್ನು ಅಧಿಕೃತ ಮಾಹಿತಿ, ದಾಖಲೆಗಳೊಂದಿಗೆ ಮಾರ್ಚ್ 16ರ ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಆಕ್ಷೇಪಣೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಾಯಚೂರಿನ ನಗರ ಕೇಂದ್ರದ ಮುಖ್ಯ ಗ್ರಂಥಾಲಯಾಧಿಕಾರಿಗಳಾದ ನಿರ್ಮಲಾ ಹೆಚ್.ಹೂಸೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *