ಲಿಂಗಸಗೂರು : ಮಾ 5 –
ಚಿನ್ನದ ಗಣಿ ಹಟ್ಟಿ ಸಮೀಪದ ನಿಲೋಗಲ್ ನಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡಿಮೆ ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸುವುದರಿಂದ ಅವು ಪದೇಪದೇ ಸುಟ್ಟು ಹೋಗುತ್ತಿದ್ದು, ಇದರ ಪರಿಣಾಮವಾಗಿ ರೈತರ ಕೃಷಿ ಚಟುವಟಿಕೆಗಳು ಅಸ್ತವ್ಯಸ್ತವಾಗಿವೆ.
ಟಿಸಿ ಸುಟ್ಟುಹೋದ ಬಳಿಕ ಹಲವಾರು ದಿನಗಳವರೆಗೆ ಬದಲಾವಣೆ ಮಾಡದಿರುವುದರಿಂದ ರೈತರ ಪಂಪ್‌ಸೆಟ್‌ಗಳು ಕಾರ್ಯನಿರ್ವಹಿಸದೆ ಬೆಳೆಗಳು ಒಣಗುತ್ತಿವೆ. ಇದರಿಂದ ಉತ್ತಮ ಇಳುವರಿಗೆ ಹೊಡೆತ ಬೀಳುತ್ತಿದ್ದು, ರೈತರಿಗೆ ಭಾರೀ ಆರ್ಥಿಕ ನಷ್ಟವಾಗುತ್ತಿದೆ ಎಂದು ನಿಲೋಗಲ್ ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಹಟ್ಟಿಯ ಗುಲಬರ್ಗಾ ವಿದ್ಯುತ್ ಸರಬರಾಜು ಇಲಾಖೆಯ ಶಾಖಾಧಿಕಾರಿಗೆ ಮನವಿ ಪತ್ರವನ್ನು ಸಲ್ಲಿಸಿದ ರೈತರು, ಪ್ರತೀ ಸಾರಿ ಟಿಸಿ ಅಳವಡಿಸುವಾಗ ರೈತರಿಂದ ₹10,000 ರಿಂದ ₹20,000 ವರೆಗೆ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈಗಾಗಲೇ ನಷ್ಟದಲ್ಲಿರುವ ರೈತರಿಗೆ ಇದು ಮತ್ತೊಂದು ಹೊರೆ ಆಗಿದೆ. ಈ ರೀತಿಯ ವಸೂಲಿಗೆ ತಕ್ಷಣ ಕಡಿವಾಣ ಹಾಕಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಟಿಸಿ ಸುಟ್ಟ 24 ಗಂಟೆಯೊಳಗೆ ಹೊಸ ಟ್ರಾನ್ಸ್‌ಫಾರ್ಮರ್ ಅಳವಡಿಸುವ ಕ್ರಮ ಕೈಗೊಳ್ಳಬೇಕು. ಜೊತೆಗೆ ಭವಿಷ್ಯದಲ್ಲಿ ಸಮಸ್ಯೆ ಮರುಕಳಿಸದಂತೆ ಕನಿಷ್ಠ 100 ಕೆವಿ ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಕಛೇರಿ ಮುಂದೆ ಪ್ರತಿಭಟನಾ ಧರಣಿ ಮಾಡಲಾಗುತ್ತದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು ಎಚ್ಚರಿಹಿಸಿದ್ದಾರೆ.
ಈ ಸಂಧರ್ಭದಲ್ಲಿ ರೈತರಾದ ನಾಗರಾಜ್, ಅಮರಪ್ಪ, ಹುಸೇನಸಾಬ್, ಶರಣಬಸವ, ಹಮೀದ್, ಹುಸೇನ್ ಸಾಬ್, ಗೌಡಪ್ಪಗೌಡ, ಯಂಕಣ್ಣ,

