ಮಸ್ಕಿ: ಕ್ಷೇತ್ರದ ಪ್ರತಿಯೊಂದು ಬೂತ್ ನಲ್ಲಿಯೂ ಪ್ರತಾಪಗೌಡ ಪಾಟೀಲರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರಿದ್ದಾರೆ. ಬಿಜೆಪಿ ಪಕ್ಷ ಬಲಿಷ್ಠ ವಾಗಿರುವುದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರಿಗೆ ಸೋಲಿನ ಭಯ ಇರುವದರಿಂದ ಮಾಜಿ ಶಾಸಕ ಪ್ರತಾಪಗೌಡರ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ನಡೆಸಿದ್ದಾ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಪ್ರತಾಪಗೌಡ ಪಾಟೀಲರು ಸ್ಪರ್ಧೆ ಮಾಡಿ ಗೆಲ್ಲುವುದು ಖಚಿತ ಎಂದು ಬಿಜೆಪಿ ಮಂಡಲ ಕಾರ್ಯದರ್ಶಿ ಮೌನೇಶ ರಾಥೋಡ್ ಹೇಳಿದರು.

ಮಸ್ಕಿ ಪಟ್ಟಣದ ಪತ್ರಿಕಾ ಭವನದಲ್ಲಿ ಗುರುವಾರ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಮಂಡಲ ಕಾರ್ಯದರ್ಶಿ ಮೌನೇಶ ರಾಠೋಡ್ ಮತ್ತು ನಾಗರಾಜ ಪವಾರ ಶ್ರೀರಾಮುಲು ಅವರು ಬಿಜೆಪಿ ಪಕ್ಷದ ರಾಜ್ಯ ಪ್ರಭಾವಿ ನಾಯಕರು ಅವರು ಮಸ್ಕಿ ಕ್ಷೇತ್ರಕ್ಕೆ ಬರುತ್ತಾರೆಂದು ಇಲ್ಲ ಸಲ್ಲದ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ 2028ರ ವಿಧಾನಸಭೆ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಿಂದ ಬಿಜೆಪಿ ಪಕ್ಷದ ವತಿಯಿಂದ ಪ್ರತಾಪ್ ಗೌಡ ಪಾಟೀಲ್ ಅವರೇ ಸ್ಪರ್ಧೆ ಮಾಡಿ ಗೆಲ್ಲಲಿದ್ದಾರೆ, ಇದರಲ್ಲಿ ಯಾವುದೇ ಅನುಮಾನ ಬೇಡ ಆದ್ದರಿಂದ ಇಲ್ಲಿನ ಬಿಜೆಪಿ ಪಕ್ಷದ ಕಾರ್ಯಕರ್ತರು ಗೊಂದಲಕ್ಕೆ ಈಡಾಗಬಾರದು. ಕಳೆದ ನಾಲ್ಕೈದು ವರ್ಷಗಳಿಂದ ಕ್ಷೇತ್ರದಲ್ಲಿ ಯಾವೊಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ವಿರೋಧ ಪಕ್ಷದ ನಾಯಕರ ಬಗ್ಗೆ ಕ್ಷೇತ್ರ ತುಂಬೆಲ್ಲಾ ಬರೀ ಹಸಿ ಸುಳ್ಳುಗಳನ್ನು ಹೇಳಿಕೊಂಡು ಓಡಾಡುತ್ತಿದ್ದು, ಪ್ರತಾಪಗೌಡ್ ಪಾಟೀಲ್ ಅವರ ಅವಧಿಯಲ್ಲಿ ಕ್ಷೇತ್ರ ಅಭಿವೃದ್ಧಿಯಾಗಿದೆ. ಆದ್ದರಿಂದ ೨೦೨೮ರ ಚುನಾವಣೆಯಲ್ಲಿ ಪ್ರತಾಪಗೌಡರನ್ನು ಎದುರಿಸಲಾಗದೆ. ಕ್ಷೇತ್ರಕ್ಕೆ ಬೇರೆ ಅವರು ಬರುತ್ತಾರೆ ಅಂತ ಬಿಜೆಪಿ ಮುಖಂಡರಲ್ಲಿ ಮತ್ತು ಕಾರ್ಯಕರ್ತರಲ್ಲಿ ಗೊಂದಲ ಸೃಷ್ಠಿ ಮಾಡಲು ಕಾಂಗ್ರೆಸ್ ಪಕ್ಷದವರು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಾಪಗೌಡರು ಬಿಟ್ಟರೇ ಬೇರೆ ಯಾರು ಮಸ್ಕಿ ಕ್ಷೇತ್ರಕ್ಕೆ ಬರಲ್ಲ. ಕಾರ್ಯಕರ್ತರು ಗೊಂದಲಕ್ಕಿಡಾಗಬಾರದು ಎಂದು ಹೇಳಿದರು. ಈ ಸಂದರ್ಭದಲ್ಲಿ ಕೃಷ್ಣ ರಾಠೋಡ್, ಸುರೇಶ ಪತ್ತಾರ ಇದ್ದರು

Leave a Reply

Your email address will not be published. Required fields are marked *