ಮಾನ್ವಿ–ತಾಲೂಕಿನ ಕರಡಿ ಗುಡ್ಡ ಗ್ರಾಮದಲ್ಲಿ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಎರಡನೇ ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದ ವಿಶೇಷ ಉಪನ್ಯಾಸಕರಾದ ಡಾ. ಬಸವರಾಜ್ ಕರಡಿಗುಡ್ಡ ಇವರು ಸಂವಿಧಾನದ ಮೌಲ್ಯಗಳನ್ನು, ತತ್ವಗಳನ್ನು, ಆಶಯಗಳನ್ನು ಎತ್ತಿ ಹಿಡಿಯುವುದು ಭಾರತೀಯ ಪ್ರಜೆಯ ಪ್ರತಿಯೊಬ್ಬರ ಆದ್ಯ ಕರ್ತವ್ಯ. ಜೊತೆಗೆ ಸಂವಿಧಾನವು ಪ್ರಸ್ತಾವನೆಯಲ್ಲಿ ತಿಳಿಸಿದಂತೆ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮನೋಭಾವನೆ, ಬೆಳೆಸಿಕೊಂಡು ವಿಚಾರ, ಅಭಿವ್ಯಕ್ತಿ ಸ್ವಾತಂತ್ರದ ಜೊತೆಗೆ ಮಹಿಳೆಯರ ಸ್ಥಾನಮಾನಕ್ಕೆ ಧಕ್ಕೆ ಉಂಟಾಗದ ರೀತಿಯಲ್ಲಿ ಸಂವಿಧಾನದ ಆಶಯಗಳನ್ನು ಗೌರವಿಸಿ ಬದುಕುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆಗಳು ತಮ್ಮದೇ ರೀತಿಯ ಹಕ್ಕು ಮತ್ತು ಕರ್ತವ್ಯಗಳನ್ನ ಬಳಸಿಕೊಂಡು ಸಂವಿಧಾನದ ಚೌಕಟ್ಟಿನೊಳಗೆ ಕಾನೂನು ರೀತಿಯಲ್ಲಿ ಸಹಕಾರ, ಸಹಬಾಳ್ವೆ ತತ್ವದ ಅಡಿಯಲ್ಲಿ ಜೀವನ ರೂಪಿಸಿಕೊಳ್ಳಬೇಕೆಂದು ತಿಳಿಸಿದರು . ಜೊತೆಗೆ ಶಿಬಿರಾರ್ಥಿಗಳು ಇತ್ತೀಚಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕಡೆ ಹೆಚ್ಚು ಒಲವು ಕೊಟ್ಟು ಸರಕಾರಿ ಹುದ್ದೆಯನ್ನು ಪಡೆಯುವ ನಿಟ್ಟಿನಲ್ಲಿ ಸತತ ಪರಿಶ್ರಮ ,ನಿರಂತರ ಅಭ್ಯಾಸದ ಕಡೆ ಗಮನ ಹರಿಸಬೇಕೆಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಚಂದ್ರಶೇಖರ್ ಹೆಳವರ ರವರು ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಸಮಯಪ್ರಜ್ಞೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಚಾರ್ಯರಾದ ಶಂಕ್ರಪ್ಪ ಅಂಗಡಿ, ಉಪನ್ಯಾಸಕರಾದ ಕುಮಾರಿ ಆಫ್ರಿನ್ ಬೇಗಂ ಶ್ರೀಮತಿ ಶೈಲಜಾ ,ಶರಣಬಸವ ಕರಡಿ ಗುಡ್ಡ ಹಾಗೂ ಸಹ ಶಿಕ್ಷಕರಾದ ಗೋಪಾಲ್ ನಾಯಕ್ ಜೂಕೂರು ಅತಿಥಿ ಶಿಕ್ಷಕರಾದ ಶ್ರೀಮತಿ ಸುಮಲತಾ, ಶ್ರೀಮತಿ ಇನಾಕ್ಷಿ ಹಾಗೂ ಕಾರ್ಯಕ್ರಮದ ನಿರೂಪಣೆಯನ್ನು ಶಿಬಿರಾರ್ಥಿ ಈಶ್ವರಮ್ಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿಗಳು ಮತ್ತು ಎನ್.ಎಸ್.ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *