ಸಿಂಧನೂರು – ತಾಲೂಕಿನ ಮಲ್ಕಾಪುರ ಪ್ರೌಢಶಾಲೆಯಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮ ಹಾಗೂ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮವು ಶಾಲಾ ಮುಖ್ಯ್ಯೊ ಪಾಧ್ಯಯರಾದ ಸಂಗಮೇಶ ಕೋಟೆ ಹಾಗೂ ಶಿಕ್ಷಕರುಗಳು ಹಾಗೂ ಎಸ್. ಡಿ. ಎಂ. ಸಿ. ಪದಾಧಿಕಾರಿಗಳ ನೇತೃತ್ವದಲ್ಲಿ ಸರಸ್ವತಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಿಂಧನೂರಿನ ಕಾರುಣ್ಯ ಆಶ್ರಮಕ್ಕೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಮತ್ತು ತಮ್ಮ ತಮ್ಮ ಕುಟುಂಬದವರ ವಿಶೇಷ ಕಾರ್ಯಕ್ರಮಗಳಲ್ಲಿ ಸಂಗ್ರಹಿಸಿದ ಸುಮಾರು ಐದು ಸಾವಿರ ರೂಪಾಯಿಗಳನ್ನು ಆಶ್ರಮದ ಕಾರ್ಯಾಧ್ಯಕ್ಷರಾದ ಡಾ. ಚನ್ನಬಸವಸ್ವಾಮಿ ಹಿರೇಮಠ ಅವರಿಗೆ ಹಿತರಿಸಿ ಗೌರವಿಸಿ ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಕಾರುಣ್ಯ ಆಶ್ರಮದ ಕಾರ್ಯಾಧ್ಯಕ್ಷರಾದ ಡಾ.ಚನ್ನಬಸವ ಸ್ವಾಮಿ ಹಿರೇಮಠ ಮಾತನಾಡಿ ಈ ನಮ್ಮ ಮಲ್ಕಾಪುರ ಪ್ರೌಢಶಾಲೆಯ ಶಿಕ್ಷಕರುಗಳು ಮತ್ತು ವಿದ್ಯಾರ್ಥಿಗಳು ತಮ್ಮ ತಮ್ಮ ವಿಶೇಷ ದಿನಗಳನ್ನು ಕಾರುಣ್ಯ ಕುಟುಂಬಕ್ಕೆ ಸಹಾಯ ಸಹಕಾರ ಮಾಡುವ ಮೂಲಕ ನೆರವೇರಿಸಿಕೊಳ್ಳುತ್ತಿರುವ ಈ ಸಂಪ್ರದಾಯ ನಮಗೆ ಇನ್ನೂ ಹೆಚ್ಚಿನ ಸೇವೆ ಮಾಡಲು ಸ್ಫೂರ್ತಿಯಾಗಿದೆ. ಮುಂದಿನ ದಿನಮಾನಗಳಲ್ಲಿ ಈ ಶಾಲೆಯ ಎಸ್.ಎಸ್. ಎಲ್. ಸಿ. ವಿದ್ಯಾರ್ಥಿಗಳು ಬರೆದು ಈ ಶಾಲೆಯ ಘನತೆ ಗೌರವವನ್ನು ಎತ್ತಿ ಹಿಡಿಯಲಿ ಎನ್ನುವ ಪ್ರಾರ್ಥನೆ ಕಾರುಣ್ಯ ಕುಟುಂಬದ್ದು. ಈ ಶಾಲೆಯು ಸಂಸ್ಕಾರದ ಶಿಕ್ಷಣದೊಂದಿಗೆ ಸಮಾಜದಲ್ಲಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸುತ್ತಿದೆ. ಮತ್ತು ಈ ಶಾಲೆಯ ಎಲ್ಲಾ ಶಿಕ್ಷಕರುಗಳು ನಿರಂತರ ತರಗತಿಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಏಳಿಗೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಇಂದು ಈ ಕಾರ್ಯಕ್ರಮದಲ್ಲಿ ನನ್ನನ್ನು ಗೌರವಿಸಿ ಸಹಾಯ ಮಾಡಿದ ಕ್ಷಣ ಇತಿಹಾಸದಲ್ಲಿ ಮರೆಯಲಾಗದ ದಿನವಾಗಿದೆ ಎಂದು ಮಾತನಾಡಿ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಕರುಗಳಿಗೆ ಧನ್ಯವಾದಗಳು ತಿಳಿಸಿದರು. ಶಿಕ್ಷಕರಾದ ಮಲ್ಲಿಕಾರ್ಜುನ ಸ್ವಾಮಿ ಮುಂದಿನ ದಿನಗಳಲ್ಲಿ ಪರೀಕ್ಷೆ ಬರೆಯುವ ಹತ್ತನೇ ತರಗತಿಯ ವಿದ್ಯಾರ್ಥಿಗಳು ನಮ್ಮ ಶಾಲೆಯ ಕೀರ್ತಿಯನ್ನು ನಾಡಿಗೆ ತೋರಿಸುತ್ತಾರೆ ಎನ್ನುವ ಭರವಸೆ ನಮ್ಮೆಲ್ಲರಿಗಿದೆ. ನಿಮ್ಮೆಲ್ಲರ ಭವಿಷ್ಯ ಸಮಾಜಕ್ಕೆ ಮಾದರಿಯಾಗಲಿ. ಅದೇ ರೀತಿ ಸಮಾಜದಲ್ಲಿ ಇರುವಂತಹ ಹಿರಿಯರನ್ನು ನಿಮ್ಮ ನಿಮ್ಮ ತಂದೆ ತಾಯಿಗಳನ್ನು ಪ್ರೀತಿ ವಿಶ್ವಾಸದಿಂದ ಕಾಣಬೇಕು ಎನ್ನುವ ಆಶಯ ನಮ್ಮೆಲ್ಲಾ ಶಿಕ್ಷಕರಿಗೆ ಇದೆ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮವನ್ನು ಹತ್ತನೇ ತರಗತಿ ವಿದ್ಯಾರ್ಥಿಯಾದ ಜೆ ಅಶೋಕ ಕುಮಾರ ನಿರೂಪಿಸಿದರು. ವಿದ್ಯಾರ್ಥಿಗಳಾದ ಮೇಘನಾ ಸಂಗಡಿಗರುಗಳಿಂದ ಪ್ರಾರ್ಥನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಸಂಗಮೇಶ ಕೋಟೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ರುದ್ರಪ್ಪ ಎಸ್. ಡಿ.ಎಂ ಸಿ ಅಧ್ಯಕ್ಷರು. ಸುಮಿತ್ರಾ ಎಸ್‌.ಡಿ.ಎಂ.ಸಿ ಸದಸ್ಯರು. ಹಾಗೂ ಶಾಲೆಯ ಶಿಕ್ಷಕರುಗಳಾದ ಮಲ್ಲಿಕಾರ್ಜುನ ಸ್ವಾಮಿ. ಗೌಡರ ರಾಜಶೇಖರ. ವೆಂಕೋಬ. ರಾಜೇಶ್ವರಿ. ಶೈನಾಜ್ ಬೇಗಂ. ದೇವಿ. ಎಸ್. ಹಾಗೂ ಸ್ಥಳೀಯರಾದ ಲಕ್ಷ್ಮಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *