ಲಿಂಗಸಗೂರು : ಮಾ 7 – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೌಕರರ ವಿವಿಧ ಬೇಡಿಕೆ ಗಳನ್ನು ಈಡೇರಿಸದಿದ್ದಲ್ಲಿ ಇಲಾಖೆಯ ಎಲ್ಲಾ ವೃಂದ ಸಂಘ ಗಳ ಸಹಯೋಗದಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಿ ವೈದ್ಯಾಧಿಕಾರಿ ಸಂಘದಿಂದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ .ರುದ್ರಗೌಡ ಪಾಟೀಲ್ ನೇತೃತ್ವ ದಲ್ಲಿ ಸಹಾಯಕ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿ ನಂತರ ಮಾತನಾಡಿದ ಅವರು

ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪ ಕವಾಗಿ ಇಲಾಖೆಯಿಂದ ಔಷಧಿ ಸರಬರಾಜು ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 3 ವರ್ಷ ಕ್ಕೊಮ್ಮೆ ತಿದ್ದುಪಡಿ, ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಕಾಲಕಾಲಕ್ಕೆ ಪ್ರಕಟಿಸುವುದು, ಎಲ್ಲಾ ವೃಂದದ ಯಾವುದೇ ಅಧಿಕಾರಿ ನೌಕರರಿಗೆ ಮುಂಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಮುಷ್ಕರ ನಡೆಸಲಾಗುವುದು
ನಮ್ಮ ಬೇಡಿಕೆ ಈಡೇರಿಕೆಗೆ ಹಲವು ಬಾರಿ ಸರ್ಕಾರಕ್ಕೆ ಕೊರಲಾಗಿದೆ. ಆದರೂ ಸರ್ಕಾರ ಸ್ಪಂದಿಸಿಲ್ಲ. ಇದೆ ಮಾರ್ಚ್ 11 ರಿಂದ 15ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳು, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲಾ ವೈದ್ಯರು, ನೌಕರರು ಕಪ್ಪುಪಟ್ಟಿ ಧರಿಸಿ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತ ಗೊಳಿಸಿ ಮುಷ್ಕರ ಹಮ್ಮಿಕೊಳ್ಳ ಲಾಗುವುದು ಎಂದು ಎಚ್ಚರಿಸಿ ದರು. ಮಾರ್ಚ್ 16ರಿಂದ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿಗೆ ಗೈರುಹಾಜರಗುವ ಮೂಲಕ ಮುಷ್ಕರ ಮುಂದುವರಿಸಲಾಗುವುದು ಎಂದು ಒತ್ತಾಯಿಸಿದರು .
ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ. ಅಮರೇಶ ಪಾಟೀಲ್, ನೌಕರರ ಸಂಘದ ಅಧ್ಯಕ್ಷ ಅಜಿಬಾಬ, ಡಾಕ್ಟರ್ ಶ್ವೇತ ನಡುವಿನಮನಿ ಡಾ. ಖಾಜಾ ಹುಸೇನ್ ವೈದ್ಯರು ಸಿಬ್ಬಂದಿಗಳು ಸೇರಿದಂತೆ ಇದ್ದರು.

Leave a Reply

Your email address will not be published. Required fields are marked *