ರಾಜ್ಯದಲ್ಲಿ ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರ “ಇನ್‌ಪುಟ್ ಸಬ್ಸಿಡಿ” ವಿತರಣೆಗೆ ಮುಖ್ಯಮಂತ್ರಿ Siddaramaiah ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು.
ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಮಾನ್ಸೂನ್ ಮಳೆಯಿಂದ ಬೆಳೆ ಹಾನಿಗೊಳಗಾದ 14.24 ಲಕ್ಷ ರೈತರಿಗೆ 1033.60 ಕೋಟಿ ರೂಪಾಯಿಗಳ ಹೆಚ್ಚುವರಿ ಸಬ್ಸಿಡಿ ಪ್ಯಾಕೇಜ್ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಶೇಷ ಯೋಜನೆಯನ್ನು ಗುರುವಾರ ಚಾಲನೆ ನೀಡಿದರು. ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗಲಿದೆ. ಒಟ್ಟಾರೆಯಾಗಿ 2251.63 ಕೋಟಿ ರೂಪಾಯಿ ಪರಿಹಾರ ವಿತರಣೆಯಾಗಲಿದೆ.
ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಗುರುವಾರ ಚಾಲನೆ ನೀಡಲಾಗಿದೆ
ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ ೨ ಹೆಕ್ಟೇರ್‌ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. ೮೫೦೦ ರಿಂದ ರೂ. ೧೭ ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.೧೭ಸಾವಿರದಿಂದ ರೂ.೨೫,೫೦೦ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.೨೨,೫೦೦ರಿಂದ ರೂ. ೩೧ ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು
ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ.
ಬೆಳೆ ಹಾನಿಯನ್ನು ನಿಖರವಾಗಿ ಖಚಿತಪಡಿಸಲು ಜಂಟಿ ಸಮೀಕ್ಷೆ ನಡೆಸಿ ಹಾನಿಯನ್ನು ಅಂದಾಜಿಸಲಾಗಿದೆ. ಎಲ್ಲಾ ದತ್ತಾಂಶಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಭೂಮಿ ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದೆ. ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್ಲೈನ್ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಎಂದು ಹೇಳಿದರು.
ಪ್ರಧಾನ ಮಂತ್ರಿಯವರನ್ನು ನವೆಂಬರ್ ೧೭ರಂದು ಭೇಟಿ ಮಾಡಿ, ಬೆಳೆ ಹಾನಿ ಇನ್ಪುಟ್ ಸಬ್ಸಿಡಿಗೆ ಪ್ರತಿಕ್ರಿಯೆ ಹಾಗೂ ಪರಿಹಾರ ಅಡಿಯಲ್ಲಿ ರೂ. ೬೧೪.೯೦ ಕೋಟಿ ಹಾಗೂ ಹಾನಿಗೊಳಗಾದ ಮೂಲಸೌಕರ್ಯಗಳನ್ನು ಸರಿಪಡಿಸಲು Pಆಓಂ (ಖeಛಿoveಡಿಥಿ & ಖeಛಿoಟಿsಣಡಿuಛಿಣioಟಿ) ಅಡಿಯಲ್ಲಿ ರೂ. ೧,೫೨೧.೬೭ ಕೋಟಿ ಪರಿಹಾರ ಒದಗಿಸಲು ಮನವಿ ಸಲ್ಲಿಸಲಾಗಿದೆ.
ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ ಸಚಿವಾಲಯದ ಕೇಂದ್ರ ತಂಡವನ್ನು ರಚಿಸಿದ್ದು, ಈ ತಂಡ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದರು.
ಈ ವೇಳೆ ಸಚಿವರುಗಳಾದ ಕೃಷ್ಣಬೈರೇಗೌಡ, ಹೆಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಎನ್.ಎಸ್.ಬೋಸರಾಜು, ಈಶ್ವರ ಖಂಡ್ರೆ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


