ಮಾನ್ವಿ : ತಾಲೂಕಿನ ಚೀಕಲಪರ್ವಿ ಶ್ರೀ ರುದ್ರಮುನೀಶ್ವರ ಮಠದ ಲಿಂಗೈಕ್ಯ ಶ್ರೀ ವಿರೂಪಾಕ್ಷ ಮಹಾಸ್ವಾಮಿಗಳ 12ನೇ ಪುಣ್ಯಸ್ಮರಣೆಯ ಅಂಗವಾಗಿ, ಪಟ್ಟಣದ ಕಳಿಂಗ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ಮಾರ್ಚ್ 9 ರಂದು ಬೆಳಿಗ್ಗೆ 10:00 ಗಂಟೆಗೆ ಉಚಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಶ್ರೀಮಠದ ವತಿಯಿಂದ ಸಮಾಜಮುಖಿ ಕಾರ್ಯಕ್ರಮವಾಗಿ ಈ ಶಿಬಿರವನ್ನು ಆಯೋಜಿಸಲಾಗುತ್ತಿದ್ದು, ಲಿಂಗೈಕ್ಯ ಶ್ರೀಗಳ ಸ್ಮರಣೆಯನ್ನು ರಕ್ತದಾನದಂತಹ ಪವಿತ್ರ ಕಾರ್ಯದ ಮೂಲಕ ಸಾರ್ಥಕಗೊಳಿಸುವ ಉದ್ದೇಶವನ್ನು ಹೊಂದಲಾಗಿದೆ. ರಕ್ತದಾನವು ಮಹಾದಾನವಾಗಿದ್ದು, ಒಬ್ಬ ವ್ಯಕ್ತಿ ನೀಡುವ ರಕ್ತವು ಮತ್ತೊಬ್ಬರ ಜೀವ ಉಳಿಸಲು ಸಹಕಾರಿಯಾಗುತ್ತದೆ. ಆದ್ದರಿಂದ ಭಕ್ತಾದಿಗಳು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಕ್ಕೆ ಆಗಮಿಸಿ, ರಕ್ತದಾನ ಮಾಡುವ ಮೂಲಕ ಈ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಚೀಕಲಪರ್ವಿ ಶ್ರೀ ರುದ್ರಮುನೀಶ್ವರ ಮಠದ ಶ್ರೀ ಸದಾಶಿವ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.ಉಚಿತ ರಕ್ತ ದಾನ ಶಿಬಿರವು ದಿ: 09-03-2026 (ಸೋಮವಾರ) ಸಮಯ ಬೆಳಿಗ್ಗೆ 10:00 ಗಂಟೆಯಿಂದ ಮಾನ್ವಿಯ ಕಳಿಂಗ ಪಿ.ಯು. ಕಾಲೇಜಿನಲ್ಲಿ ನಡೆಯಲಿದೆ

Leave a Reply

Your email address will not be published. Required fields are marked *