ರಾಯಚೂರು ಮಾರ್ಚ್ 07 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಜನರಿಗೆ ಒದಗಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿರುವ ಗ್ರಾಮ-1 ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾರ್ವಜನಿಕರು ತಮ್ಮ ಸಮೀಪದಲ್ಲೇ ಸರ್ಕಾರದ ಅನೇಕ ಸೇವೆಗಳನ್ನು ಸುಲಭವಾಗಿ ಪಡೆಯಲು ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ವೆಬ್‌ಸೈಟ್ ವಿಳಾಸ: https://sevasindhuservices.karnataka.gov.in/directApply.do?serviceld=2631 ಮೂಲಕ ಮಾರ್ಚ್ 15ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

