ರಾಯಚೂರು ಮಾರ್ಚ್ 07 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯ 33/11 ಕೆವಿ ಕಲ್ಮಲಾ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಮಾರ್ಚ್ 09ರ ಬೆಳಿಗ್ಗೆ 10ಗಂಟೆಗೆ ಯಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

