ಕಲಬುರಗಿ :ಜಿಲ್ಲೆಯ ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿ ನಾಳೆ ನಡೆಯಲಿರುವ ಅಡಿಗಲ್ಲು ಹಾಗೂ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಇಂದು ಸಚಿವ ಪ್ರಿಯಾಂಕ್ ಖರ್ಗೆ ಪರಿಶೀಲಿಸಿದರು.ಅಂದಾಜು ₹1,069 ಕೋಟಿ ವೆಚ್ಚದ ಯೋಜನೆಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ನಡೆಯಲಿದ್ದು, ರಾಜ್ಯಸಭೆ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉದ್ಘಾಟನೆ ನೆರವೇರಿಸಲಿದ್ದಾರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಶರಣಪ್ರಕಾಶ ಪಾಟೀಲ್, ಲೋಕಸಭಾ ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಅವರು ಉಪಸ್ಥಿತರಿರಲಿದ್ದಾರೆ. ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ನಡೆಸಿಕೊಡುವ ಸಲುವಾಗಿ ವೇದಿಕೆ, ಊಟದ ಸ್ಥಳ, ಆಸನ ವ್ಯವಸ್ಥೆಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸಚಿವರು ಅಗತ್ಯ ಸಲಹೆಗಳನ್ನು ನೀಡಿದರು.

Leave a Reply

Your email address will not be published. Required fields are marked *