ಮಾನ್ವಿ: ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಆರ್‌ಜಿ ಕ್ಯಾಂಪ್ ರಸ್ತೆಯಲ್ಲಿ ನಿರ್ಮಿಸಲಾದ ನೂತನ ಅಶ್ವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ್ ಅವರು ಉದ್ಘಾಟಿಸಿದರು. ಈ ಮೂಲಕ ಸ್ಥಳೀಯ ಜನತೆಗೆ ಉತ್ತಮ ಆರೋಗ್ಯ ಸೇವೆಗಳು ಲಭ್ಯವಾಗಲಿವೆ ಎಂದು ಅವರು ತಿಳಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಿಗೆ ಸಮೀಪದಲ್ಲೇ ಉತ್ತಮ ವೈದ್ಯಕೀಯ ಸೌಲಭ್ಯಗಳು ದೊರೆಯುವುದು ಅತ್ಯಂತ ಮುಖ್ಯವಾಗಿದೆ. ನೂತನವಾಗಿ ಆರಂಭವಾಗಿರುವ ಅಶ್ವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾನ್ವಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಆರೋಗ್ಯ ಸೇವೆಯಲ್ಲಿ ಮಹತ್ವದ ಕೊಡುಗೆ ನೀಡಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಗಫೂರ್ ಸಾಬ್, ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನರಸರಾವ್ ಪೆಟ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಡಲವಾಡ ಶ್ರೀ ಅರವಿಂದ್ ಬಾಬು, ಮಾಜಿ ಶಾಸಕ ರಾಜ ವೆಂಕಟಪ್ಪ ನಾಯಕ್, ಕಲ್ಮಟ್ಟದ ಶ್ರೀಗಳು ಹಾಗೂ ಚಿಕ್ಕಲಪರ್ವಿ ಮಠದ ಶ್ರೀಗಳು, ಸೆಂಟ್ ಮೇರಿ ಚರ್ಚ್ ಫಾದರ್, ಕುರುಬ ಸಮಾಜದ ರಾಜ್ಯಾಧ್ಯಕ್ಷರಾದ ಎಂ. ಈರಣ್ಣ, ಎ. ಬಾಲಸ್ವಾಮಿ ಕೊಡಲಿ, ರೌಡ್ರು ಮಹಾಂತೇಶ್ ಸ್ವಾಮಿ, ಸೈಯದ್ ಖಾಲಿದ್ ಖಾದ್ರಿ, ರಾಜ ಸುಭಾಷ್ ಚಂದ್ರ ನಾಯಕ್, ಜಿ. ನಾಗರಾಜ್, ಚಾಂದ್ ಪಾಶ ಗುತ್ತೇದಾರ್, ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾದ ಎಸ್.ಬಿ. ಪಾಟೀಲ್, ನ್ಯಾಯವಾದಿಗಳಾದ ಎ.ಬಿ. ಉಪ್ಪಳಮಠ, ಆರ್‌ಜಿ ಕ್ಯಾಂಪ್ ರಾಮಕೃಷ್ಣ, ವಿ.ಟಿ. ಮಲ್ಲಿಕಾರ್ಜುನ್, ಸತ್ತಾರ್ ಬಂಗ್ಲೆವಾಲೆ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಆಸ್ಪತ್ರೆಯನ್ನು ಆರಂಭಿಸಿರುವ ವೈದ್ಯ ದಂಪತಿಗಳಾದ ಡಾ. ರಮ್ಯಾ ವೀರವಲ್ಲಿ ಮತ್ತು ಡಾ. ಅಶ್ವಿನಿ ಕಾಂತ್ ತಲತೊಟ್ಟಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆಯ ಮಾಜಿ ಸದಸ್ಯರುಗಳು, ವಿವಿಧ ಸಂಘಟನೆಗಳ ಮುಖಂಡರುಗಳು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.
ಈ ನೂತನ ಆಸ್ಪತ್ರೆ ಆರಂಭದಿಂದ ಮಾನ್ವಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *