ಮಾನ್ವಿ : ಪಟ್ಟಣದ ಸಾಮಾರ್ಥ್ಯ ಸೌಧದಲ್ಲಿ ತಾಲೂಕು ಪಂಚಾಯಿತಿ ಮಾನ್ವಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ರಾಯಚೂರು ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಹಾಗೂ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ಸಮುದಾಯ ಆಧಾರಿತ ಪುನರ್ವಸತಿ “10 ಹೆಜ್ಜೆಗಳು” ತರಬೇತಿ ಶಿಬಿರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಕಲ್ಪ ವಿಕಲಚೇತನರ ಒಕ್ಕೂಟದ ಗೌರವಾಧ್ಯಕ್ಷ ದೇಸಾಯಿ ದೋತರಬಂಡಿ, ವಿಕಲಚೇತನರ ಅಭಿವೃದ್ಧಿಗೆ ಸಮುದಾಯ ಆಧಾರಿತ ಪುನರ್ವಸತಿ ಅತ್ಯಂತ ಮುಖ್ಯವಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದು, ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕ ಟೀಕ್ ರಾಜ್, ಡಿಡಿಆರ್‌ಸಿ ನೂಡಲ್ ಅಧಿಕಾರಿ ಹನುಮಂತ, ಸಂಕಲ್ಪ ವಿಕಲಚೇತನರ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಕುಮಾರ್ ಚಲ್ಮಲ್‌, ಜಿಲ್ಲಾ ಉಪಾಧ್ಯಕ್ಷೆ ಸಾವಿತ್ರಮ್ಮ, ಆರ್‌ಪಿಡಿ ಟಾಸ್ಕ್ ಫೋರ್ಸ್ ಸಮಿತಿ ಜಿಲ್ಲಾಧ್ಯಕ್ಷ ಎಂ.ಡಿ. ಜಾಫರ್, ಪುರಸಭೆ ನಾಮ ನಿರ್ದೇಶಿತ ಸದಸ್ಯ ವಿಜಯಕುಮಾರ ಗೌಡ, ರಾಯಚೂರು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ಅಮರೇಶ ಯಾದವ, ಮಾನ್ವಿ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ರಾಘವೇಂದ್ರ, ಪಿ & ಓ ಟೆಕ್ನಿಶಿಯನ್ ಆನಂದ, ಸಂಕಲ್ಪ ವಿಕಲಚೇತನರ ಒಕ್ಕೂಟದ ತಾಲೂಕು ಅಧ್ಯಕ್ಷೆ ಲಕ್ಷ್ಮೀ, ಆರ್‌ಪಿಡಿ ಟಾಸ್ಕ್ ಫೋರ್ಸ್ ಸಮಿತಿ ತಾಲೂಕು ಅಧ್ಯಕ್ಷ ಹನುಮೇಶ ಕಾತರಿಕಿ ಸೇರಿದಂತೆ ವಿಕಲಚೇತನ ಮುಖಂಡರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *