ಮಸ್ಕಿ: ಮಸ್ಕಿ ತಾಲೂಕಿನ ಗುಂಡ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಸರಸ್ವತಿ ಪೂಜೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವನ್ನು ಸಡಗರದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಪ್ರದೀಪ್ ಪೂಜಾರಿ ಮಾಸ್ಟರ್, ಸಂಸ್ಥಾಪಕರು ಸೇವಾ ಸಿರಿ ಚಾರಿಟೇಬಲ್ ಟ್ರಸ್ಟ್ (ರಿ) ಅವರನ್ನು ಶಾಲೆಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರದೀಪ್ ಪೂಜಾರಿ ಅವರು ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ಆತ್ಮರಕ್ಷಣೆಗೆ ಅಗತ್ಯವಾದ ಕರಾಟೆ ತರಬೇತಿ ಬಗ್ಗೆ ಮಾರ್ಗದರ್ಶನ ನೀಡಿದರು. ಮಹಿಳೆಯರು ಸ್ವಯಂರಕ್ಷಣೆಯಲ್ಲಿ ಸಬಲರಾಗಬೇಕು ಎಂಬ ಸಂದೇಶವನ್ನು ನೀಡಿದರು.
ಇದರ ಜೊತೆಗೆ, ಪ್ರತಿ ವರ್ಷದಂತೆ ಈ ವರ್ಷವೂ ಶಾಲೆಯ ಮಕ್ಕಳಿಗೆ ಬೇಸಿಗೆಯ ತೀವ್ರ ಬಿಸಿಲನ್ನು ಗಮನಿಸಿ ಶಾಲೆಯ ತರಗತಿಗಳಿಗೆ 3 ಸೀಲಿಂಗ್ ಫ್ಯಾನ್‌ಗಳನ್ನು ಉಚಿತವಾಗಿ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು “ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ”ನೀವು ದಾನವನ್ನು ಮಾಡಲು ಬಯಸಿದರೆ ಸರ್ಕಾರಿ ಶಾಲೆಗಳಿಗೆ ಏನಾದರೂ ದಾನ ಮಾಡಿ ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳ ಆಶೀರ್ವಾದ ಪಡೆಯಿರಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮದ ಗಣ್ಯರು ಉಪಸ್ಥಿತರಿದ್ದರು. ಸರ್ಕಾರಿ ಶಾಲೆ ಉಳಿಸಿ – ಬೆಳೆಸಿ.


