ಸಿಂಧನೂರು : (ಬೆಂಗಳೂರು)
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಯಶಸ್ವಿಯಾಗಿ ಆರು ವರ್ಷಗಳನ್ನು ಪೂರೈಸಿರುವ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಸಿಂಧನೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ವಸಂತಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಆತ್ಮೀಯವಾಗಿ ಅಭಿನಂದಿಸಿದರು.
ಕಳೆದ ಆರು ವರ್ಷಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಕಾರಣರಾದ ಡಿ.ಕೆ. ಶಿವಕುಮಾರ್ ಅವರ ಶ್ರಮವನ್ನು ಈ ಸಂದರ್ಭದಲ್ಲಿ ಶಾಸಕರು ಶ್ಲಾಘಿಸಿದರು.
ಅಭಿನಂದನೆ ಸಲ್ಲಿಸುವ ಜೊತೆಗೆ, ಸಿಂಧನೂರು ವಿಧಾನಸಭಾ ಕ್ಷೇತ್ರದ ನೀರಾವರಿ ಯೋಜನೆಗಳು, ರಸ್ತೆ ಅಭಿವೃದ್ಧಿ ಹಾಗೂ ಕ್ಷೇತ್ರದ ವಿವಿಧ ಪ್ರಗತಿಪರ ಕೆಲಸಗಳ ಕುರಿತು ಶಾಸಕ ಹಂಪನಗೌಡ ಬಾದರ್ಲಿ ಅವರು ಉಪ ಮುಖ್ಯಮಂತ್ರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.ಪಕ್ಷದ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬುವಲ್ಲಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದ ಪಾತ್ರ ದೊಡ್ಡದು ಎಂದು ಎಂ.ಎಲ್.ಸಿ ವಸಂತಕುಮಾರ್ ಅವರು ಹಾರೈಸಿದರು.
ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಚಾತುರ್ಯ ಮತ್ತು ಕಾರ್ಯಕ್ಷಮತೆ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ಭದ್ರವಾದ ಬುನಾದಿ ಹಾಕಿಕೊಟ್ಟಿದೆ. ಅವರ ಮುಂದಿನ ರಾಜಕೀಯ ಜೀವನವು ಹೀಗೆಯೇ ಯಶಸ್ವಿಯಾಗಿ ಸಾಗಲಿ,” ಎಂದು ಶಾಸಕ ಹಂಪನಗೌಡ ಬಾದರ್ಲಿ ಶುಭ ಹಾರೈಸಿದರು.

Leave a Reply

Your email address will not be published. Required fields are marked *