ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುವ “ಗರ್ಭಕಂಠದ ಕ್ಯಾನ್ಸರ್‌” ತಡೆಗೆ 14 ವರ್ಷದ ಹೆಣ್ಣು ಮಕ್ಕಳಿಗೆ ದಿನಾಂಕ 11.03.2026 ರಂದು ಜಿಲ್ಲೆಯಲ್ಲಿ ಉಚಿತ ಹೆಚ್‌ಪಿವಿ ‘ಹ್ಯೂಮನ್ ಪ್ಯಾಪಿಲೋಮ ವೈರಸ್’ ವಿರುದ್ಧದ ಲಸಿಕೆಯನ್ನು ಹಾಕಲಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳಿಗೆ ತಪ್ಪದೆ ಹಾಕಿಸಲು ಹತ್ತಿರದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಜಿಲ್ಲಾ ಆರ್‌ಸಿಹೆಚ್‌ ಅಧಿಕಾರಿ ಡಾ ನಂದಿತಾ ಎಮ್‌ ಎನ್‌ ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಅಡಿಯಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 14 ವರ್ಷದ ಹೆಣ್ಣು ಮಕ್ಕಳಿಗೆ ಹಾಕುವ ಹೆಚ್‌ಪಿವಿ ಲಸಿಕೆ ಜಾಗೃತಿ ಕುರಿತು ಸಿಯಾತಲಾಬ್‌ ಸರಕಾರಿ ಪ್ರೌಢಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಮಾತನಾಡುತ್ತಾ, ಸಾಮಾನ್ಯವಾಗಿ ವೈಯಕ್ತಿಕ ಶುಚಿತ್ವ, ಜನನಾಂಗಗಳಲ್ಲಿ ತೊಂದರೆ, ಹುಣ್ಣು, ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡುವ ಹ್ಯೂಮನ್ ಪ್ಯಾಪಿಲೋಮ ವೈರಸ್ (ಹೆಚ್‌ಪಿವಿ) ಸೋಂಕು ಕ್ರಮೇಣ ಗರ್ಭಕಂಠದ ಜೀವಕೋಶಗಳಲ್ಲಿ ಬದಲಾವಣೆಗಳಾಗಿ ಕ್ಯಾನ್ಸರ್‌ರಾಗಿ ಬದಲಾಗುತ್ತದೆ. ಈ ಹಿನ್ನಲೆಯಲ್ಲಿ ಆರೋಗ್ಯಕ್ಕೆ ಮಾರಕವಾಗುವುದನ್ನು ತಡೆಯಲು ಹೆಚ್‌ಪಿವಿ ಲಸಿಕೆಯನ್ನು ಮಾರ್ಗಸೂಚಿಯಡಿ 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತವಾಗಿ ಹಾಕಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಲು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಬೇಟಿ ನೀಡುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸಿಯಾತಲಾಬ್‌ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಗುಂಡಮ್ಮ, ಜಿಲ್ಲಾ ಆರೋಗ್ಯ ಶಿಕ್ಷಣಧಿಕಾರಿ ಈಶ್ವರ ಹೆಚ್‌ ದಾಸಪ್ಪನವರ, ಶಾಲಾ ಮುಖ್ಯೋಪಾದ್ಯಾಯರು ವಿ ಕೆ ಜೋಷಿ, ಕ್ಷೇತ್ರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸರೋಜಾ ಕೆ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಅನೀತಾ, ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ಆಶಾ ಕಾರ್ಯಕರ್ತೆಯ ವಿಜಯಾ ಸೇರಿದಂತೆ ಶಿಕ್ಷಕರು, ಪಾಲಕರು, ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *