ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಇಲ್ಲಿನ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಮಾರ್ಚ್ 16ರ ಬೆಳಿಗ್ಗೆ 10 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದ ಹತ್ತಿರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ- 2026ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಯು ಪರೀಕ್ಷೆ; ಅರ್ಥಶಾಸ್ತçಕ್ಕೆ 865 ವಿದ್ಯಾರ್ಥಿಗಳು ಗೈರು
ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಜಿಲ್ಲೆಯ 43 ಪರೀಕ್ಷೆ ಕೇಂದ್ರಗಳಲ್ಲಿ ಮಾರ್ಚ 10ರಂದು ಅರ್ಥಶಾಸ್ತ್ರ ವಿಷಯದ ಪರೀಕ್ಷೆ ನಡೆಯಿತು.
ಒಟ್ಟು 12,692 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 11,827 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 865 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕರಾದ ಸೋಮಶೇಖರಪ್ಪ ಹೋಕ್ರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

