ಸಾಹಿತ್ಯ ಅರಿವು ಹಾಗೂ ರಾಜ್ಯದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಹೆಚ್ಚಿಸುವ ಪ್ರಮುಖ ಸಾಧನವಾಗಿದೆ.‌ ಕಾರಣ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳು ಕನ್ನಡ ವಿಷಯವನ್ನು ಗಂಭೀರವಾಗಿ ಅಧ್ಯಯನ ಮಾಡುವುದು ಅತ್ಯಂತ ಮುಖ್ಯ ಇದರಿಂದ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಎಂದು ಸಹಾಯಕ ಪ್ರಾಧ್ಯಾಪಕ ಎಂ.ಡಿ.ಚಿತ್ತರಗಿ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಕನ್ನಡ ವಿಭಾಗ ಮತ್ತು ಐಕ್ಯೂ ಎಸ್‌.ಸಿ ಘಟಕದ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕನ್ನಡ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ನೀಡಿ ಮಾತನಾಡುತ್ತಾ, ಕನ್ನಡ ವಿಷಯವನ್ನು ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳ ಭಾಷಾ ಜ್ಞಾನ, ವ್ಯಾಕರಣದ ಅರಿವು ಮತ್ತು ಶಬ್ದ ಸಂಪತ್ತು ಹೆಚ್ಚುತ್ತದೆ. ಇದು ಪರೀಕ್ಷೆಗಳಲ್ಲಿ ಸರಿಯಾದ ಉತ್ತರಗಳನ್ನು ಬರೆಯಲು ಸಹಾಯಕವಾಗುತ್ತದೆ.

ಕನ್ನಡ ಸಾಹಿತ್ಯ ಮತ್ತು ಇತಿಹಾಸದ ಮೂಲಕ ನಮ್ಮ ರಾಜ್ಯದ ಸಂಸ್ಕೃತಿ, ಪರಂಪರೆ ಮತ್ತು ಮಹನೀಯರ ಕುರಿತು ತಿಳಿದು ಕೊಳ್ಳಬಹುದು. ಇದು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ. ರಾಜ್ಯ ಮಟ್ಟದ ಹಲವಾರು ಸರ್ಕಾರಿ ಉದ್ಯೋಗಗಳ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯ ಜ್ಞಾನ ಕಡ್ಡಾಯವಾಗಿರುತ್ತದೆ. ಆದ್ದರಿಂದ ಕನ್ನಡದಲ್ಲಿ ಪಾರಂಗತತೆ ಹೊಂದಿರುವುದು ಬಹಳ ಮುಖ್ಯ.

ಕನ್ನಡ ಸಾಹಿತ್ಯದ ಅಧ್ಯಯನದಿಂದ ಉತ್ತಮ ಚಿಂತನೆ, ನೈತಿಕ ಮೌಲ್ಯಗಳು ಮತ್ತು ಜೀವನದ ಪಾಠಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಇದು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಕೆ.ಖಾದರ ಭಾಷರವರು ಮಾತನಾಡಿ,  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡದ ಮಹತ್ವ ಅಪಾರವಾಗಿದೆ. ವಿದ್ಯಾರ್ಥಿಗಳು ಕನ್ನಡವನ್ನು ಕೇವಲ ಒಂದು ವಿಷಯವಾಗಿ ಅಲ್ಲ, ಜ್ಞಾನ ಮತ್ತು ಸಂಸ್ಕೃತಿಯ ಸಂಪತ್ತಾಗಿ ಪರಿಗಣಿಸಿ ಅಧ್ಯಯನ ಮಾಡಬೇಕು. ಕನ್ನಡ ಮೇಲೆ ಪ್ರೀತಿ ಮತ್ತು ಅಧ್ಯಯನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಹೇಳಿದರು

ಕನ್ನಡ ವಿಭಾಗದ ಮುಖ್ಯಸ್ಥ ಮೌಲಸಾಬ್ ಅವರು ಕಾರ್ಯಕ್ರಮದ ಉದ್ದೇಶದ ನುಡಿಗಳನ್ನು ಮತ್ತು ಎಂ.ಡಿ.ಚಿತ್ತರಗಿರವರ ಪರಿಚಯವನ್ನು ಮಾಡಿದರು.

ಈ ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಡಾ.ಚನ್ನಬಸವ, ರಾಜೇಶ, ಹನುಮೇಶ, ಗಂಗಾಬಾಯಿ, ಉಪನ್ಯಾಸಕರಾದ ಮಹಾದೇವ, ನರಸಣ್ಣ, ತಿಮ್ಮಯ್ಯ, ಶಿವಶರಣಪ್ಪ, ನಾಗರಾಜ, ಬಸವರಾಜ, ರಾಕೇಶ ವಿದ್ಯಾರ್ಥಿ ಪ್ರತಿನಿಧಿ ಮಂಜಮ್ಮ ಉಪಸ್ಥಿತಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕು.ಸುಮಿತ್ರಾ ನಿರೂಪಣೆ

ಕು.ಮಾಳಮ್ಮ ಸ್ವಾಗತ, ಕು.ನಾಗಲಕ್ಷ್ಮಿ ವಂದನಾರ್ಪಣೆ

ನೆರವೇರಿಸಿದರು.

Leave a Reply

Your email address will not be published. Required fields are marked *