ರಾಯಚೂರು ಮಾರ್ಚ್ 11 (ಕರ್ನಾಟಕ ವಾರ್ತೆ): ಜಿಲ್ಲೆಯ ಲಿಂಗಸುಗೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಸ್ವಾಯತ್ತ ಸಂಸ್ಥೆಯಾಗಿದ್ದು, ಇಲ್ಲಿ ವಿವಿಧ ವಿಭಾಗದ ವಿಷಯಗಳನ್ನು ಬೋಧಿಸಲು ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿಇ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ 01 ಹುದ್ದೆ, ಬಿ.ಇ ಇನ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ 01 ಹುದ್ದೆ, ಎಂಟೆಕ್ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ 01 ಹುದ್ದೆ, ಎಂಟೆಕ್ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ 01 ಹುದ್ದೆಗೆ 01 ವರ್ಷದ ಬೋಧನೆ ಅಥವಾ ಕೈಗಾರಿಕಾ ಅನುಭವವನ್ನು ಅಭ್ಯರ್ಥಿಗಳು ಹೊಂದಿರಬೇಕು.
ಆಸಕ್ತರು ಸ್ವ-ವಿವರವನ್ನು ಕಾಲೇಜಿನ ಇಮೇಲ್ ಐಡಿ: gtte.lingasugur@gmail.com ಗೆ ಕಳಿಸಿ, 2026ರ ಮಾರ್ಚ್ 16ರಿಂದ ಮಾರ್ಚ್18ರವರೆಗೆ ನಡೆಯುವ ಸಂರ್ದಶನದಲ್ಲಿ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಲಿಂಗಸುಗೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು ಕಚೇರಿಯ ಸಮಯದಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ಅಥವಾ ಮೊಬೈಲ್ ಸಂಖ್ಯೆ: 8548038965ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಲಿಂಗಸುಗೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾಂಶುಪಾಲರಾದ ಪ್ರತೀಬಾ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

