ರಾಯಚೂರು ಮಾರ್ಚ್ 11 (ಕರ್ನಾಟಕ ವಾರ್ತೆ): ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2022-23 ಮತ್ತು 2023-24ನೇ ಸಾಲಿಗೆ ಜಿಲ್ಲೆಯ ಸಿರವಾರ ತಾಲ್ಲೂಕಿನ ಅಂಗನವಾಡಿ ಕೇಂದ್ರ ಸಂಖ್ಯೆ 12 ಹಾಗೂ ಅತ್ತನೂರು ಅಂಗನವಾಡಿ ಕೇಂದ್ರ ಸಂಖ್ಯೆ 5ರಲ್ಲಿ ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕರ್ತೆ ಹುದ್ದೆಗೆ 5.500 ರೂ. ಮತ್ತು ಸಹಾಯಕಿ ಹುದ್ದೆಗೆ 3,000 ರೂ. ಗೌರವಧನ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಂಬಂಧ ಪಟ್ಟ ಅಂಗನವಾಡಿ ಕೇಂದ್ರದ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯಿಂದ ಸರ್ವೆ ವ್ಯಾಪ್ತಿಯಲ್ಲಿರುವ ಬಗ್ಗೆ ದೃಢೀಕರಣ ಪಡೆದು ಸಲ್ಲಿಸಬೇಕು. ಅಭ್ಯರ್ಥಿಯು ಮಹಿಳೆ ಆಗಿರಬೇಕು. ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಆಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದಿದ್ದಲ್ಲಿ ಕರ್ನಾಟಕ ರಾಜ್ಯ ಪ್ರೌಡ ಶಿಕ್ಷಣ ಪರೀಕ್ಷ ಮಂಡಳಿ ನಡೆಸುವ 10 ನೇ ತರಗತಿಯಲ್ಲಿ ತೇರ್ಗಡೆ ಆಗಿರುವವರನ್ನು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರನ್ನು ಪರಿಗಣಿಸಬಹುದಾಗಿದೆ.

ವಯೋಮಿತಿ, ಅರ್ಜಿ ಸಲ್ಲಿಸಲು ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು. ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ವಿಧವೆಯರು ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ರಿಯಾಯಿತಿ ಇರುತ್ತದೆ. ಅಭ್ಯರ್ಥಿಯು 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಅಥವಾ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಓದಿರಬೇಕು. ಅಪೇಕ್ಷಿತ ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ 6 ತಿಂಗಳಿಂದ 6 ವರ್ಷದ ಮಕ್ಕಳ ಪೋಷಣೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಕನಿಷ್ಠ 6 ತಿಂಗಳ ಅವಧಿಯ ವಿಷಯವನ್ನು ಅಥವಾ ತರಬೇತಿ ಪಡೆದಿರಬೇಕು. ಆಸಕ್ತರು ಮಾರ್ಚ್ 30ರೊಳಗಾಗಿ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಿರವಾರದಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಿರವಾರ ಇವರನ್ನು ಕಚೇರಿ ವೇಳೆಯಲ್ಲಿ ಭೇಟಿ ನೀಡಬಹುದಾಗಿದೆ ಅಥವಾ ಮೊಬೈಲ್ ಸಂಖ್ಯೆ: 7619281523ಗೆ ಸಂಪರ್ಕ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *