ರಾಯಚೂರು ಮಾರ್ಚ್ 11 (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂಬತ್ತನೇ ಕಂತಿನ ಅನುದಾನದಲ್ಲಿ ಜಿಲ್ಲೆಯ 4,06,897 ಫಲಾನುಭವಿಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ರಾಯಚೂರು ಇವರ ಮೂಲಕ 87,58,76,000 ರೂ. ಡಿಬಿಟಿ ಪ್ರಕ್ರಿಯೆ ಚಾಲ್ತಿ ಮಾಡಲಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *