ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 2026ರ ಮಾರ್ಚ್ 12ರ ಗುರುವಾರ ನಡೆದ ಹಿಂದಿ ವಿಷಯದಲ್ಲಿ 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಜಿಲ್ಲೆಯ 43 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಹಿಂದಿ ವಿಷಯದಲ್ಲಿ ಪರೀಕ್ಷೆಗೆ 1,351 ವಿದ್ಯಾರ್ಥಿಗಳು ನೋಂದಣಿಯಾಗಿದ್ದ ಪೈಕಿ 1,322 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
