ರಾಯಚೂರು,ಮಾ.13- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾಗಿ ರಾಯಚೂರವಾಣಿ ಪತ್ರಿಕೆ ವ್ಯವಸ್ಥಾಪಕ ಸಂಪಾದಕ ಶ್ರೀ ಅರವಿಂದ ಕುಲಕರ್ಣಿ ನೇಮಕವಾಗಿದ್ದಾರೆ.
ಬೆಂಗಳೂರಿನ ಕೆಯುಡಬ್ಲ್ಯೂಜೆ ಕೇಂದ್ರ ಕಚೇರಿಯಲ್ಲಿ ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶ್ರೀ ಶಿವಾನಂದ ತಗಡೂರು ಅವರು ಅರವಿಂದ ಕುಲಕರ್ಣಿ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿದರು.  ಸಂಘದ ಎಲ್ಲಾ ಚಟುವಟಿಕೆಯಲ್ಲಿ ಸಕ್ರೀಯವಾಗಿ ಭಾಗವಹಿಸಿ ಸಂಘದ ಬೈಲಾ ನಿಯಮಗಳಿಗೆ ಬದ್ಧರಾಗಿ ಸಂಘದ ಹಿರಿಮೆ ಎತ್ತಿ ಹಿಡಿಯುವ ಮತ್ತು ಸಂಘಟನೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ನೇಮಕಾತಿ ಆದೇಶದಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಅರವಿಂದ ಕುಲಕರ್ಣಿ ಅವರು ರಾಯಚೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು ಈಗ ರಾಜ್ಯ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಆರ್.ಗುರುನಾಥ, ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ, ಹಿರಿಯ ಪತ್ರಕರ್ತರಾದ ಕೆ.ಸತ್ಯನಾರಾಯಣ, ಜಿ.ವೀರಾರೆಡ್ಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *