ತಾಳಿಕೋಟಿ: ಪವಿತ್ರ ರಮಜಾನ ಮಾಸದ ಅಂಗವಾಗಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಮುದ್ದೇಬಿಹಾಳ ಮತಕ್ಷೇತ್ರ ಶಾಸಕರಾದ ಸಿ.ಎಸ್.ನಾಡಗೌಡ(ಅಪ್ಪಾಜಿ) ಇವರ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ಇಂದು (ಮಾ.14) ಶನಿವಾರ ಸೌಹಾರ್ದ ಇಫ್ತಾರ ಕೂಟವನ್ನು ಆಯೋಜಿಸಲಾಗಿದೆ. ಪಟ್ಟಣದ ಹಳೆ ತರಕಾರಿ ಮಾರುಕಟ್ಟೆ ಆವರಣದಲ್ಲಿ ಸಂಜೆ 5-30ಕ್ಕೆ ನಡೆಯಲಿರುವ ಈ ಸೌಹಾರ್ದ ಇಫ್ತಾರ ಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಶಾಸಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
