ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತಿಯಿರುವ ರಾಯಚೂರು ಸೇರಿದಂತೆ ಕೊಪ್ಪಳ, ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯನಗರ ಹಾಗೂ ಬೀದರ ಜಿಲ್ಲೆಗಳ ಯುವಕರಿಗೆ ಅರ್ಜಿ ಸಲ್ಲಿಸಲು ಏಪ್ರೀಲ್ 01 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ಯುವಕರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ ಭೇಟಿ ನೀಡಿ ಅಲ್ಲಿ ಅಗ್ನಿಪಥ್ ಟ್ಯಾಬ್ ಕ್ಲಿಕ್ ಮಾಡಿ, ಆಧಾರ್ ಅಥವಾ 10ನೇ ತರಗತಿ ಸರ್ಟಿಫಿಕೇಟ್ ಬಳಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಶುಲ್ಕ 250 ರೂ. ನಿಗದಿಪಡಿಸಲಾಗಿದ್ದು, ಅಗ್ನಿವೀರ್ ಜನರಲ್ ಡ್ಯೂಟಿ ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿಯಲ್ಲಿ ಕನಿಷ್ಠ ಶೇ.45 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಗ್ನಿವೀರ್ ಟೆಕ್ನಿಕಲ್‌ಗೆ ಅರ್ಜಿ ಸಲ್ಲಿಸಲು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣ ಅಥವಾ 10ನೇ ತರಗತಿಯ ಜೊತೆಗೆ ಐಟಿಐ ಮುಗಿಸಿರಬೇಕು.
ಅಗ್ನಿವೀರ್ ಕ್ಲರ್ಕ್ ಹಾಗೂ ಸ್ಟೋರ್ ಕೀಪರ್ ಹುದ್ದೆಗಳಿಗೆ ಯಾವುದೇ ವಿಭಾಗದ ಪಿಯುಸಿಯಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಪಡೆದಿರಬೇಕು. ಇಂಗ್ಲಿಷ್ ಮತ್ತು ಗಣಿತ ವಿಷಯ ಕಡ್ಡಾಯವಾಗಿರುತ್ತದೆ.
ಅಗ್ನಿವೀರ್ ಟ್ರೇಡ್ಸ್ಮನ್ ಹುದ್ದೆಗೆ 8 ನೇ ಅಥವಾ 10ನೇ ತರಗತಿ ಉತ್ತೀರ್ಣರಾಗಿರಬೇಕು. ಎರಡು ಹಂತಗಳಲ್ಲಿ ಸಾಮರ್ಥ್ಯದ ಪರೀಕ್ಷೆ ನಡೆಯಲ್ಲಿದ್ದು ಮೊದಲಿಗೆ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ಇರುತ್ತದೆ. ಇದರಲ್ಲಿ ಉತ್ತೀರ್ಣರಾದವರಿಗೆ ಮುಂದಿನ ಹಂತಕ್ಕೆ ಅವಕಾಶವಿರುತ್ತದೆ. ಎರಡನೇ ಹಂತದಲ್ಲಿ ನೇಮಕಾತಿ ರ‍್ಯಾಲಿಯಲ್ಲಿ ದೈಹಿಕ ಪರೀಕ್ಷೆ ಇರುತ್ತದೆ ಎಂದು ಭಾರತೀಯ ಸೇನೆಯ ಬೆಂಗಳೂರು ಕೇಂದ್ರ ಕಚೇರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *