ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 23ರಂದು ದೇವರ ದಾಸಿಮಯ್ಯ ಜಯಂತಿ ಹಾಗೂ ಮಾರ್ಚ್ 31ರಂದು ಭಗವಾನ್ ಮಹಾವೀರ್ ಜಯಂತಿ ನಡೆಯಲಿವೆ.
ಈ ಜಯಂತಿಗಳ ಅಂಗವಾಗಿ ಮಾರ್ಚ್ 17ರ ಬೆಳಿಗ್ಗೆ 11ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಮಾಜದ ಮುಖಂಡರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


