ಮಾನ್ವಿ : ತಾಲೂಕಿನ ಚೀಕಲಪರ್ವಿ ಗ್ರಾಮದ ಶ್ರೀ ರುದ್ರಮುನೀಶ್ವರ ಮಠದಲ್ಲಿ ಲಿಂ. ವಿರೂಪಾಕ್ಷ ಮಹಾಸ್ವಾಮಿಗಳವರ 12ನೇ ಪುಣ್ಯಸ್ಮರಣೋತ್ಸವ ಭಕ್ತಿಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ಕತ್ರುಗದುಗೆಗೆ ಬೆಳಿಗ್ಗೆ ರುದ್ರಾಭಿಷೇಕ ಹಾಗೂ ವಿಶೇಷ ಹೂವಿನ ಅಲಂಕಾರ ಮಾಡಲಾಯಿತು.
ಶ್ರೀಮಠದ ಆವರಣದಲ್ಲಿ ನೂತನ ಪೂಜ್ಯರ ಕಟ್ಟಡವನ್ನು ಹಾಲ್ವಿ ಚರಣಗಿರಿ ಸಂಸ್ಥಾನ ಮಠದ ಅಭಿನವ ಮಹಾಂತಸ್ವಾಮಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಗುರುವಿನ ಸೇವೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡಾಗ ಮಾತ್ರ ಜೀವನದಲ್ಲಿ ಉತ್ತಮ ಫಲಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪುಣ್ಯಸ್ಮರಣೆ ಅಂಗವಾಗಿ ಭಕ್ತರಿಗೆ ಪ್ರಸಾದ ಸೇವೆ ನಡೆಯಿತು. ಕಾರ್ಯಕ್ರಮದಲ್ಲಿ ಯದ್ದಲದೊಡ್ಡಿ ಸುವರ್ಣಗಿರಿ ಸಂಸ್ಥಾನ ಮಠದ ಮಹಾಲಿಂಗ ಮಹಾಸ್ವಾಮಿಗಳು, ಮುನವಳ್ಳಿ ಮಠದ ಮುರುಗೇಂದ್ರ ಮಹಾಸ್ವಾಮಿಗಳು, ಬಳಗನೂರು ಮರಿಶಿವಯೋಗಿಗಳ ಮಠದ ಸಿದ್ದಬಸವ ಮಹಾಸ್ವಾಮಿಗಳು, ಮೈಸೂರಿನ ನಿರಂಜನದೇವರು, ಅರಳಹಳ್ಳಿ ಮಠದ ಶರಣಬಸವ ದೇವರು ಸೇರಿದಂತೆ ಶ್ರೀಮಠದ ಭಕ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *