ಮಾನವಿ,ಮಾ.14: ಭವಿಷ್ಯದಲ್ಲಿ ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಮುಕ್ತಗೊಳಿಸಲು ನೆಮ್ಮದಿಯ ಜೀವನ ನಡೆಸಲು ಪ್ರಸ್ತುತ 14 ವರ್ಷದ ಹೆಣ್ಣು ಮಕ್ಕಳಿಗೆ ಹಾಕಲಾಗುವ ಹೆಚ್.ಪಿ.ವಿ ಲಸಿಕೆಯನ್ನು ಪಾಲಕರು ಯಾವುದೆ ಹಿಂದೇಟು ಹಾಕದೆ ಲಸಿಕೆ ಹಾಕಿಸಿರಿ, ಇದಕ್ಕಾಗಿ ಎಲ್ಲರೂ ಮುಂದೆ ಬರಬೇಕು ಎಂದು ಕುರ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಸಂಗಮೇಶ ವಿನಂತಿಸಿದರು.
ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಮಾನವಿ, ಮೂಲಕ ಕುರ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್‌ಪಿವಿ ಲಸಿಕೆಯನ್ನು 14 ವರ್ಷದ ಶಾಲಾ ಮಕ್ಕಳಿಗೆ ಲಸಿಕೆ ಹಾಕುವ ಪೂರ್ವದಲ್ಲಿ ಮಾತನಾಡಿ,
ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗೆ ಈ ಲಸಿಕೆ ಅತ್ಯಂತ ಉಪಯುಕ್ತವಾಗಿದ್ದು, ಅನಗತ್ಯ ತಪ್ಪು ಮಾಹಿತಿಗಳಿಗೆ ಕಿವಿಗೊಡದೆ, 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಹೆಚ್.ಪಿ.ವಿ (ಹೂಮನ್ ಪ್ಯಾಪಿಲೋಮ ವೈರಸ್) ವಿರುದ್ಧದ ಲಸಿಕೆ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಲಸಿಕೆ ಹಾಕಿಸಲು ಕೋರಿದರು.
ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣಗಳು:
ಸಾಮಾನ್ಯವಾಗಿ ವೈಯಕ್ತಿಕ ಶುಚಿತ್ವ, ಜನನಾಂಗಗಳಲ್ಲಿ ತೊಂದರೆ, ಹುಣ್ಣು, ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡುವ ಹೂಮನ್ ಪ್ಯಾಪಿಲೋಮ ವೈರಸ್ (ಹೆಚ್.ಪಿ.ವಿ) ಸೋಂಕು ಕ್ರಮೇಣ ಗರ್ಭಕಂಠದ ಜೀವಕೋಶಗಳಲ್ಲಿ ಬದಲಾವಣೆಗಳಾಗಿ ಕ್ಯಾನ್ಸರ್ ಆಗಿ ಬದಲಾಗುತ್ತದೆ.
ಈ ಹಿನ್ನಲೆಯಲ್ಲಿ ಮಾರಕವಾಗುವುದನ್ನು ತಡೆಯಲು ಹೆಚ್.ಪಿ.ವಿ ಲಸಿಕೆಯು ಸೂಕ್ತವಾಗಿದೆ.
ಈ ಸಂದರ್ಭದಲ್ಲಿ ಡಾ ಸೌಮ್ಯ ವೈದ್ಯಾಧಿಕಾರಿ, ಮುಖ್ಯೋಪಾದ್ಯಾಯ ಶಂಕರ, ಶೂಶ್ರೂಷಣಾಧಿಕಾರಿ ರಾಧಾ, ಆರೋಗ್ಯ ನಿರೀಕ್ಷಣಾಧಿಕಾರಿ ಅನಿಲ್‌ಕುಮಾರ್, ತರಬೇತಿ ಫಾರ್ಮಸಿ ಅಧಿಕಾರಿ ದೀಪಾ, ಆಶಾ ಕಾರ್ಯಕರ್ತೆ ಸಂತೋಷಮ್ಮ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.


