ರಾಯಚೂರು,ಮಾ.13:
14 ವರ್ಷದ ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ ಲಸಿಕೆಯನ್ನು ಪಾಲಕರು ಯಾವುದೆ ಹಿಂದೇಟು ಹಾಕದೆ ಲಸಿಕೆ ಹಾಕಿಸುವ ಮೂಲಕ ಭವಿಷ್ಯದಲ್ಲಿ ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ದೂರವಿರಿಸಲು ಎಲ್ಲರೂ ಮುಂದೆ ಬರಲು ಹರಿಜನವಾಡಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಸುನೀಲ್ ವಿನಂತಿಸಿದರು.
ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿಯ ಮೂಲಕ ಹರಿಜನ ವಾಡಾದ ಸರಕಾರಿ ಪ್ರೌಡಶಾಲೆಯಲ್ಲಿ ಹೆಚ್‌ಪಿವಿ ಲಸಿಕೆ ಮಹತ್ವದ ಬಗ್ಗೆ ಮಾತನಾಡುತ್ತಾ,
ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗೆ ಈ ಲಸಿಕೆ ಅತ್ಯಂತ ಉಪಯುಕ್ತವಾಗಿದ್ದು, ಅನಗತ್ಯ ತಪ್ಪು ಮಾಹಿತಿಗಳಿಗೆ ಕಿವಿಗೊಡದೆ, 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಹೆಚ್.ಪಿ.ವಿ (ಹೂಮನ್ ಪ್ಯಾಪಿಲೋಮ ವೈರಸ್) ವಿರುದ್ಧದ ಲಸಿಕೆ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಲಸಿಕೆ ಹಾಕಿಸಲು ಕೊರಿದರು.
ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣಗಳು:
ಸಾಮಾನ್ಯವಾಗಿ ವೈಯಕ್ತಿಕ ಶುಚಿತ್ವ, ಜನನಾಂಗಗಳಲ್ಲಿ ತೊಂದರೆ, ಹುಣ್ಣು, ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡುವ ಹೂಮನ್ ಪ್ಯಾಪಿಲೋಮ ವೈರಸ್ (ಹೆಚ್.ಪಿ.ವಿ) ಸೋಂಕು ಕ್ರಮೇಣ ಗರ್ಭಕಂಠದ ಜೀವಕೋಶಗಳಲ್ಲಿ ಬದಲಾವಣೆಗಳಾಗಿ ಕ್ಯಾನ್ಸರ್ ಆಗಿ ಬದಲಾಗುತ್ತದೆ.
ಈ ಹಿನ್ನಲೆಯಲ್ಲಿ ಮಾರಕವಾಗುವುದನ್ನು ತಡೆಯಲು ಹೆಚ್.ಪಿ.ವಿ ಲಸಿಕೆಯು ಸೂಕ್ತವಾಗಿದೆ.
ಇದೆ ರೀತಿಯಲ್ಲಿ, ಮಡ್ಡಿಮೇಟೆ ಪ್ರೌಢ ಶಾಲೆ, ಸ್ಷೇಷನ್ ರೋಡ್ ಬಾಕಿಯರ ಪ್ರೌಢಶಾಲೆಯಲ್ಲಿ ಜಾಗೃತಿ ನಡುವೆ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಮುಖೋಪಾಧ್ಯಾಯ ಬಾಬು, ಶ್ರೀನಿವಾಸ್, ಬಿ.ಹೆಚ್.ಇ.ಓ. ಸರೋಜ. ಕೆ, ಶಿಕ್ಷಕಿ ರಾಧಾ, ಛಾಯಾ, ಜಯಲಕ್ಷ್ಮೀ, ಪಿ.ಹೆಚ್.ಸಿ.ಓ ಮಂಜುಳಾ, ಗಿರಿಜಾ, ವಸಂತಕುಮಾರಿ, ಹೆಚ್‌ಐಓ ಅರುಣ್‌ಕುಮಾರ್, ಆಶಾ ವಿಜಯಭಾರತಿ, ಬಸವೇಶ್ವರಿ ಸೇರಿದಂತೆ ಪೋಷಕರು, ಶಾಲಾ ವಿದ್ಯಾರ್ಥಿಗಳು ಇದ್ದರು.

