ಮಸ್ಕಿ ತಾಲೂಕಿನ ಹಾಲಾಪೂರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿಸಿ ರಸ್ತೆಗೆ ಭೂಮಿ ಪೂಜೆಯನ್ನ ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್ ಬಸನಗೌಡ ತುರವಿಹಾಳ ನೆರವೇರಿಸಿದರು. ಕಾಮಗಾರಿಯು ಒಂದು ಕೋಟಿ ರೂಪಾಯಿ ಮೊತ್ತದಲ್ಲಿ ಸಿಸಿ ರಸ್ತೆ, ಚರಂಡಿ, ಬೀದಿ ದೀಪ ಅಳವಡಿಸುವ ಕಾಮಗಾರಿಯಾಗಿದೆ, ಹೀಗಾಗಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು, ಗುತ್ತಿಗೆದಾರರು ಕೆಲಸವನ್ನು ಗುಣಮಟ್ಟದ ಮತ್ತು ಸರಿಯಾದ ಸಮಯಕ್ಕೆ ಕೆಲಸ ಮುಗಿಸಿ ಜನರಿಗೆ ಅನುಕೂಲತೆ ಮಾಡಬೇಕು, ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಪರ ಕೆಲಸಗಳನ್ನು ಮಾಡುತ್ತಿದ್ದು, ಈಗಾಗಲೇ ಬೇಸಿಗೆ ಆರಂಭವಾಗಿದ್ದು ಆಯಾ ಗ್ರಾಮ ಪಂಚಾಯತಿಯ ಪಿಡಿಒ ಮತ್ತು ಸಿಬ್ಬಂದಿಯವರು ತಮ್ಮ ತಮ್ಮ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ಅದಕ್ಕೆ ಅವ್ಯವಸ್ಥೆ ಕಂಡು ಬಂದರೆ ಅದಕ್ಕೆ ನೇರ ಹೊಣೆ ಗ್ರಾಮ ಪಂಚಾಯತಿಯ ಪಿಡಿಒ ಅವರ ಮೇಲೆ ಸೂಕ್ತಕ್ರಮ ಕೈಗೊಳ್ಳಲಾಗುವುದು, ಮುಖ್ಯವಾಗಿ ಪ್ರಸ್ತುತ ಕುಡಿಯುವ ನೀರಿಗೆ ಮೊದಲ ಆದ್ಯತೆ ಎಂದು ಹೇಳುತ್ತಾ, ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಜನಪರ ಕೆಲಸವನ್ನು ಮಾಡಲಾಗುವುದು ಎಂದು ಶಾಸಕ ಆರ್ ಬಸನಗೌಡ ತುರವಿಹಾಳ ಹೇಳಿದರು. ಈ ವೇಳೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟಿಲ್ ಯದ್ದಲದಿನ್ನಿ ಹಾಗೂ ಮುಖಂಡರು, ಅಧಿಕಾರಿಗಳು, ಗುತ್ತಿಗೆದಾರರು ಇದ್ದರು.

Leave a Reply

Your email address will not be published. Required fields are marked *