ಮಸ್ಕಿ: ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆಗೆ ಒತ್ತಾಯಿಸಿ ಮಾ. ೧೬ ರಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಡಿವಾಳ ಮಾಚಿದೇವ ಸೇವಾಸಮಿತಿ ಪ್ರಧಾಕ ಕಾರ್ಯದರ್ಶಿ ದೇವರಾಜ ಮಡಿವಾಳ ಹೇಳಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಸವ ಮಾಚಿದೇವ ಮಹಾಸ್ವಾಮಿ ಚಿತ್ರದುರ್ಗ, ಮುಕ್ತಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ನಮ್ಮ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂಬ ಕೂಗು ಹಲವಾರು ದಶಕಗಳಿಂದ ಕೇಳಿ ಬರುತ್ತಿದೆ. ನಮ್ಮ ಬೇಡಿಕೆ ಈಡೇರಿಕೆಗೆ ಇಲ್ಲಿಯವರೆಗೆ ಆಡಳಿತ ನಡೆಸಿದ ಯಾವ ಸರ್ಕಾರ ಮಾಡಿಲ್ಲ. ಸ್ವಾತಂತ್ರ ಬಂದಾಗಿನಿಂದಲೂ ನಮ್ಮ ಸಮಾಜವನ್ನು ಬಟ್ಟೆ ಶುದ್ಧ ಮಾಡಲು ಮಾತ್ರ ಬಳಿಸಿಕೊಳ್ಳುತ್ತಾರೆ. ಈಗಾಗಲೇ ದೇಶದ ೧೮ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ನಮ್ಮ ಜನಾಂಗವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸಲಾಗಿದೆ. ಆದ್ದರಿಂದ ಈ ರಾಜ್ಯಗಳಲ್ಲಿ ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಮುಂದುವರಿದಿರುವುದು ಕಾಣುತ್ತದೆ. ಆದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ನಮ್ಮನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ ನಮ್ಮ ರಾಜ್ಯದಲ್ಲಿ ನಮಗೆ ಯಾವುದೇ ರೀತಿಯ ಮಾನ್ಯತೆಯನ್ನು ನೀಡದಿರುವುದು ಶೋಚನೀಯವಾಗಿದೆ. ಆದ್ದರಿಂದ ರಾಜ್ಯದಲ್ಲಿರುವ ಪ್ರತಿಯೊಬ್ಬ ಕುಲ ಬಾಂಧವರು. ಜನಾಂಗದ ಮುಖಂಡರು, ಸಮಾಜದ ವಿವಿಧ ಸಂಘ-ಸಂಸ್ಥೆಗಳ, ರಾಜ್ಯದ ಜಿಲ್ಲಾ ಮತ್ತು ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟಿಸಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಒತ್ತಾಯಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ದುರಗಪ್ಪ, ಲಕ್ಷ್ಮಣ, ದೇವಪ್ಪ ಸೇರಿದಂತೆ ಇನ್ನಿತರರಿದ್ದರು.

