ಮಸ್ಕಿ: ನಿಗದಿತ ಅವಧಿಯೊಳಗೆ ಗುಣಮಟ್ಟದ ಪಿ.ಸಿ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು ಶಾಸಕ ಆರ್.ಬಸನಗೌಡ ತುರವಿಹಾಳ ಗುತ್ತಿಗೆದಾರನಿಗೆ ಸೂಚಿಸಿದರು.
ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ, ವಿಭಾಗ ಬಳ್ಳಾರಿ ವತಿಯಿಂದ ಪೊಲೀಸ್ ಗೃಹ ೨೦೨೫ ಯೋಜನೆ ಅಡಿಯಲ್ಲಿ ಪಟ್ಟಣದಲ್ಲಿ ೧೨ ಪಿ.ಸಿ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಾಸಕ ಶನಿವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ೩.೬೮ ಕೋಟಿ ಅನುದಾನದಲ್ಲಿ ಈ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದ್ದು, ಪೊಲೀಸ್ ಸಿಬ್ಬಂದಿಗೆ ಉತ್ತಮ ವಸತಿ ಸೌಲಭ್ಯ ಒದಗಿಸಲಾಗುವುದು. ಇದರಿಂದ ಪಟ್ಟಣದಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ವಾಸಸ್ಥಳದ ಸಮಸ್ಯೆ ಪರಿಹಾರವಾಗಲಿದೆ ಎಂದರು.
ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಭದ್ರತೆಗಾಗಿ ಹಗಲು-ರಾತ್ರಿ ಸೇವೆ ಸಲ್ಲಿಸುತ್ತಿದ್ದು, ಅವರಿಗೆ ಸಮರ್ಪಕ ವಸತಿ ಹಾಗೂ ಮೂಲಸೌಲಭ್ಯ ಒದಗಿಸುವುದು ಎಲ್ಲರ ಆದ್ಯತೆಯಾಗಿದೆ. ಈ ಯೋಜನೆಯಿಂದ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಲಿಂಗಸುಗೂರು ಡಿವೈಎಸ್‌ಪಿ ದತ್ತಾತ್ರೇಯ ಕರ್ನಡ್, ಸಿಪಿಐ ರಮೇಶ ಜಾಲಿಗೇರಿ, ಪಿಎಸ್‌ಐ ಕೆ. ರಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ನಿರುಪಾದೆಪ್ಪ ಗುಡಿಹಾಳ, ಅಂದಾನಪ್ಪ ಗುಂಡಳ್ಳಿ, ಬಲವಂತರಾಯ ವಟಗಲ್, ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ, ಪುರಸಭೆ ಸದಸ್ಯರು ಸೇರಿದಂತೆ ಇನ್ನಿತರೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿದ್ದರು.
ವಿವಿಧ ಕಾಮಗಾರಿಗೆ ಚಾಲನೆ: ತಾಲೂಕಿನ ಮಲ್ಲದಗುಡ್ಡ-ಉದ್ಬಾಳ ರಸ್ತೆ ಕಾಮಗಾರಿಗೆ ಹಾಗೂ ಹಾಲಾಪೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿಸಿ ರಸ್ತೆಗೆ ಶಾಸಕ ಆರ್.ಬಸನಗೌಡ ಚಾಲನೆ ನೀಡಿದರು.

