ಸಿಂಧನೂರು: ಸಿಂಧನೂರಿನ ನೋಬಲ್ ಟೆಕ್ನೋ ಶಾಲೆಯ ವಿದ್ಯಾರ್ಥಿಗಳು ಆಂಧ್ರ ಪ್ರದೇಶದ ಅನಂತಪುರದಲ್ಲಿ ಮಾರ್ಚ್ 14, 2026ರಂದು ವಿಶ್ವಮ್ ಎಜುಟೆಕ್ ಸಂಸ್ಥೆ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ಪೆಲ್ ಬಿ (Spell Bee) ಸ್ಪರ್ಧೆಯಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಸ್ಪರ್ಧೆಯಲ್ಲಿ ಶ್ರೀನಿಧಿ (3ನೇ ತರಗತಿ) ಹಾಗೂ ಅಲಿಯಾ (6ನೇ ತರಗತಿ) ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ರಾಷ್ಟ್ರ ಮಟ್ಟದ ಸ್ಪರ್ಧೆಗಳು ಶೀಘ್ರದಲ್ಲೇ ಹೈದರಾಬಾದ್‌ನಲ್ಲಿ ನಡೆಯಲಿವೆ.

ಇದೇ ವೇಳೆ ರೂಪಿಕಾ (4ನೇ ತರಗತಿ) ಮತ್ತು ವೇಣು (5ನೇ ತರಗತಿ) ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಉಪವಿಜೇತರು ಆಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರುವಂತೆ ಶುಭ ಹಾರೈಸಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ ನೋಬಲ್ ಟೆಕ್ನೋ ಶಾಲೆಯಲ್ಲಿ ವಿವಿಧ ರೀತಿಯ ಶೈಕ್ಷಣಿಕ ಸ್ಪರ್ಧೆಗಳು ಮತ್ತು ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ ಎಂದು ಶಾಲೆಯ ಆಡಳಿತಾಧಿಕಾರಿ ಸೈಯದ್ ತನವೀರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *