ಕರ್ನಾಟಕ ಲೋಕಸೇವಾ ಆಯೋಗವು (KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್‌ ಸುದ್ದಿಯೊಂದನ್ನು ನೀಡಿದೆ. 384 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ನಿಗದಿಯಾಗಿದ್ದ ವ್ಯಕ್ತಿತ್ವ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಯನ್ನು ಆಡಳಿತಾತ್ಮಕ ಕಾರಣಗಳಿಂದಾಗಿ ದಿಢೀರನೆ ಮುಂದೂಡಲಾಗಿದೆ.ಈ ಕುರಿತು ಆಯೋಗವು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಅಭ್ಯರ್ಥಿಗಳಲ್ಲಿ ಆತಂಕ ಮೂಡಿಸಿದೆ.

ಹಳೆಯ ವೇಳಾಪಟ್ಟಿ ಏನಿತ್ತು?

ದಿನಾಂಕ 10-03-2026 ರಂದು ಪ್ರಕಟವಾದ ಮಾಹಿತಿಯಂತೆ, ಕೆಎಎಸ್‌ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಮಾರ್ಚ್ 23, 2026 ರಿಂದ ಮೇ 04, 2026 ರವರೆಗೆ ವಿವಿಧ ಹಂತಗಳಲ್ಲಿ ಸಂದರ್ಶನವನ್ನು ನಡೆಸಲು ನಿರ್ಧರಿಸಲಾಗಿತ್ತು. 1:3 ಅನುಪಾತದಲ್ಲಿ ಒಟ್ಟು 1,152 ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 2 ರಂದು ಬಿಡುಗಡೆ ಮಾಡಲಾಗಿತ್ತು. ರಾಜ್ಯದ ವಿವಿಧ ಮೂಲೆಗಳಿಂದ ಅಭ್ಯರ್ಥಿಗಳು ಸಂದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆದರೆ, ಇದೀಗ ಈ ಸಂಪೂರ್ಣ ವೇಳಾಪಟ್ಟಿಯನ್ನು ಆಯೋಗವು ಅಧಿಕೃತವಾಗಿ ಹಿಂಪಡೆದಿದೆ.

Leave a Reply

Your email address will not be published. Required fields are marked *