ಆಧುನಿಕತೆಯ ಪೈಪೋಟಿ ಯುಗದಲ್ಲಿ ನಾವಿದ್ದೇವೆ. ಸತತ ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯ. ಪ್ರತಿಭೆಗಳ ಪ್ರದರ್ಶನಕ್ಕೆ ಕ್ರೀಡಾಕೂಟ ಉತ್ತಮ ವೇದಿಕೆಯಾಗಿದೆ. ಕ್ರೀಡಾಪಟುಗಳು ಹೆಚ್ಚಿನ ತರಬೇತಿ ಪಡೆದು, ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ. ಪ್ರಸ್ತುತ ದಿನಮಾನಗಳಲ್ಲಿ ಪಠ್ಯ ಶಿಕ್ಷಣದಷ್ಟೇ ಕ್ರೀಡೆಗಳಿಗೂ ಪ್ರಾಮುಖ್ಯತೆಯಿದ್ದು, ಕ್ರೀಡಾ ಕ್ಷೇತ್ರದಲ್ಲೂ ಅತ್ಯುತ್ತಮ ಸಾಧನೆ ಮಾಡಬಹುದಾಗಿದೆ ಎಂದು ಶಾಸಕರಾದ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಕ್ಲಬ್ ಕಾಕತೀಯಾದಲ್ಲಿ ಸರಕಾರಿ ಪದವಿ ಮಹಾವಿದ್ಯಾಲಯದಿಂದ ಅಂತರ್ ಕಾಲೇಜುಗಳ ಪುರುಷರ ಹಾಗೂ ಮಹಿಳೆಯರ ಬ್ಯಾಡ್ಮಿಂಟನ್ ಏಕವಲಯ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, 45 ಕೋಟಿ ವೆಚ್ಚದಲ್ಲಿ ಸರಕಾರಿ ಮಹಾವಿದ್ಯಾಲಯ ನೂತನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. 1.5 ಕೋಟಿ ವೆಚ್ಚದಲ್ಲಿ ಪಿಡಬ್ಲ್ಯೂಡಿ ಕ್ಯಾಂಪಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಅತ್ಯುತ್ತಮ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಮಹಾವಿದ್ಯಾಲಯಕ್ಕೆ ಬೇಕಾಗುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಮಾಜಿ ಸಚಿವರು ಹಾಗೂ ಕೆಓಎಫ್ ಅಧ್ಯಕ್ಷರಾದ ವೆಂಕಟರಾವ್ ನಾಡಗೌಡ ಮಾತನಾಡಿ, ಕ್ರೀಡೆಗಳು ಮನುಷ್ಯನ ಅವಿಭಾಜ್ಯ ಅಂಗ. ಆರೋಗ್ಯ ಸರಿಯಿದ್ದರೆ ಎಲ್ಲವನ್ನು ಮಾಡಬಹುದು. ಉತ್ತಮ ಆರೋಗ್ಯಕ್ಕೆ ಕ್ರೀಡೆಗಳು ಪೂರಕವಾಗಿವೆ. ಓದಿದವರು ಸಾಧನೆ ಮಾಡುತ್ತಾರೆ ಎನ್ನುವ ಕಾಲಘಟ್ಟ ಬದಲಾಗಿದೆ. ಕ್ರೀಡಾಕ್ಷೇತ್ರದಲ್ಲೂ ಅಭೂತಪೂರ್ವ ಸಾಧನೆ ಮಾಡಲು ಅವಕಾಶಗಳಿವೆ. ಈ ಸಮಾಜವು ಕ್ರೀಡಾ ಸಾಧಕರನ್ನು. ಗುರುತಿಸಿ ಗೌರವಿಸುತ್ತಿದೆ. ಕ್ರೀಡೆಗಳಲ್ಲಿ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಕೋಟ್ಯಾಧಿಪತಿಗಳಾಗಿದ್ದಾರೆ. ಮೊಡೆಲ್‌ಗಳಾಗಿದ್ದಾರೆ. ಗುರಿ ಸಾಧನೆಗೆ ಸತತ ಪ್ರಯತ್ನ ಅಗತ್ಯವಾಗಿದೆ ಎಂದರು.

ಈ ವೇಳೆ: ಪ್ರಾಂಶುಪಾಲ ಪಾಂಡು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣಾ, ಕ್ರೀಡಾ ವಿಭಾಗದ ನಿರ್ದೇಶಕಿ ಡಾ.ತಲಾ ಎಂ.ಎಸ್, ಸಂಯೋಜಕ ಮಲ್ಲಿಕಾರ್ಜುನ ಎನ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ ಹಟ್ಟಿ, ಅಮರೇಶ ಮಾಡಶಿರವಾರ, ಅಯ್ಯನಗೌಡ ಕಲ್ಲೂರು, ಸಹಪ್ರಾಧ್ಯಾಪಕಿ ಡಾ.ಪುಷ್ಪಾ, ಪತ್ರಾಂಕಿತ ವ್ಯವಸ್ಥಾಪಕ ಮಹ್ಮದ್ ಸಿದ್ದಿಕಿ, ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ವಿಶ್ವನಾಥ ಪಾಟೀಲ್ ಗೋನಾಳ ವೇದಿಕೆಯಲ್ಲಿದ್ದರು. ಸರಕಾರಿ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಂಯೋಜಕ ಡಾ.ಲವಕುಮಾರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *