ಕವಿತಾಳ: ಮಾರ್ಚ್ 18 ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಶಿಕ್ಷಕರು ಪರೀಕ್ಷಾ ಕೇಂದ್ರದಲ್ಲಿ ಪೂರಕವಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಯಿತು.
ಪಟ್ಟಣದಲ್ಲಿ ಒಟ್ಟು ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಕರ್ನಾಟಕ ಪಬ್ಲಿಕ್ ಶಾಲೆ (ಪ್ರೌಢಶಾಲಾ) ವಿಭಾಗ ಕೇಂದ್ರ, ಬಾಲಕೀಯರ ಸರ್ಕಾರಿ ಪ್ರೌಢಶಾಲಾ ಕೇಂದ್ರ ಹಾಗೂ ನವಚೇತನ ಶಾಲೆಯ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿನ ವಿಧ್ಯುತ್ ಬಲ್ಬ್, ಫ್ಯಾನ್‌ಗಳ, ಎಲ್ಲಾ ಕೊಠಡಿಗಳಿಗೆ ಮತ್ತು ಆವರಣದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆಯನ್ನು ಪರಿಶೀಲಿಸಿಕೊಳ್ಳಲಾಯಿತು.
ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದ ಪರೀಕ್ಷೆ ಸಹಾಯಕರಾದ ಸಿದ್ರಾಮೇಶ್ ಅವರು ಕೊಠಡಿ ಮೇಲ್ವಿಚಾರಕರಿಗೆ ಪರೀಕ್ಷಾ ಕೇಂದ್ರದ ನಿಯಮಗಳನ್ನು ಮತ್ತು ಕೇಂದ್ರದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಸವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಮುಖ್ಯ ಅಧೀಕ್ಷಕಿ ಮಂಜುಳಾ ಅಂಗಡಿ, ಶ್ರೀನಿವಾಸ ಸೇರಿದಂತೆ ಪರೀಕ್ಷಾ ಕೇಂದ್ರದ ನಿಯೋಜಿತ ಕೊಠಡಿ ಮೇಲ್ವಿಚಾರಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *