ಬೆಂಗಳೂರು : ಸದನದಲ್ಲಿ ಶಾಸಕರ ಪ್ರಶ್ನೆ : ಸ್ಥಳೀಯ ಜಿಲ್ಲಾ/ತಾಲ್ಲೂಕು ಪಂಚಾಯಿತಿ ಅವಧಿ ಪೂರ್ಣಗೊಂಡು ವರ್ಷಗಳ ಕಳೆದರೂ ಚುನಾವಣೆಯನ್ನು ನಡೆಸದಿರುವುದರಿಂದ ವ್ಯವಸ್ಥೆಯು ಸಂಸ್ಥೆಗಳಾದ ಇನ್ನೂ ಕುಂಠಿತಗೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ;
ಶೀಘ್ರದಲ್ಲಿ ಚುನಾವಣೆ ನಡೆಸಲು ಸರ್ಕಾರ ಕೈಗೊಂಡ ಕ್ರಮಗಳೇನು; ಸದರಿ ಚುನಾವಣೆಗಳನ್ನು/ಪ್ರಕ್ರಿಯೆಗಳನ್ನು ಯಾವಾಗ ಪ್ರಾರಂಭಿಸಲಾಗುವುದು ಎಂದು ಕೇಳಿದಾಗ

ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ ಖರ್ಗೆ , ರಾಜ್ಯದ ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ 2020 ರಲ್ಲಿ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲಾಗಿರುತ್ತದೆ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಜನವರಿ-ಫೆಬ್ರವರಿ 2021 ರಲ್ಲಿ ಚುನಾವಣೆ ನಡೆಸಿ ಆಯ್ಕೆ ಮಾಡಲಾಗಿದ್ದು, ಈ ಅವಧಿಯು ಜನವರಿ- ಫೆಬ್ರವರಿ-ಮಾರ್ಚ್ 2026 ರವರೆಗೆ ಇರುತ್ತದೆ. ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಅವಧಿಯು ಜೂನ್ 2021ಕ್ಕೆ ಮುಕ್ತಾಯಗೊಂಡಿರುತ್ತದೆ. ಅವಧಿಯು ಮುಗಿದ ನಂತರ ಚುನಾವಣೆಯನ್ನು ನಡೆಸುವ ಸಿದ್ಧತೆಯಲ್ಲಿದ್ದಾಗ ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಸಾಧ್ಯವಾಗಲಿಲ್ಲ. ತದನಂತರ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ಕ್ಕೆ ತಿದ್ದುಪಡಿ ತಂದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ರಚಿಸಲಾಗಿತ್ತು. ಆಯೋಗವು ನೀಡಿದ ಶಿಫಾರಸ್ಸಿನಂತೆ ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಯ ಸೀಮಾ ಆಯೋಗವನ್ನು ಗಡಿಯನ್ನು ಗುರುತಿಸಿ ಅಧಿಸೂಚಿಸಲಾಗಿತ್ತು.
ಪರಿವರ್ತನೆ. ಕೆಲವು ಗ್ರಾಮ ಪಂಚಾಯತಿಗಳು ಪಟ್ಟಣ ಪಂಚಾಯತಿ /ಪುರಸಭೆ/ನಗರ ಸಭೆಗಳಾಗಿ ಯಾಗಿರುವುದರಿಂದ, ಸಂಬಂಧಿಸಿದ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಿಂದ ಕೈ ಬಿಡಲು ಅಧಿಸೂಚನೆ ಹೊರಡಿಸಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಸೀಮಾ/ಗಡಿಗಳನ್ನು నిగధి ಮಾಡಲಾಗಿದೆ., ಪ್ರಸ್ತುತ ನಗರಾಭಿವೃದ್ಧಿ ಇಲಾಖೆಯು ಡಿಸೆಂಬರ್-2025 ಮತ್ತು ಜನವರಿ 2026 ರಲ್ಲಿ ಕೆಲವು ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿ / ಪುರಸಭೆ /ನಗರ ಸಭೆಗಳಾಗಿ ಪರಿವರ್ತನೆ ಮಾಡಿದ್ದು ಸಂಬಂಧಿಸಿದ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಿಂದ ಕೈ ಬಿಡಲು ಅಧಿಸೂಚನೆ ಹೊರಡಿಸಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಸೀಮಾ/ಗಡಿಗಳನ್ನು ನಿಗಧಿ ಮಾಡಲಾಗಿದೆ. , ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಪ್ರಕ್ರಿಯೆ ಪೂರ್ಣಗೊಂಡ ನಂತರ ಚುನಾವಣೆ ನಡೆಸಲಾಗುವುದು.

Leave a Reply

Your email address will not be published. Required fields are marked *