ರಾಯಚೂರು ಮಾರ್ಚ್ 18 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾರ್ಚ್ 18ರ ಬುಧವಾರ ದಂದು 101 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ವಿಷಯದಲ್ಲಿ ಒಟ್ಟು 30,295 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 663 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 4,033 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 78 ವಿದ್ಯಾರ್ಥಿಗಳು ಗೈರಾಗಿದ್ದಾರೆ, ಲಿಂಗಸುಗೂರು ತಾಲ್ಲೂಕಿನಲ್ಲಿ 6,142 ಹಾಜರಾಗಿ 113 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಾನ್ವಿ ತಾಲ್ಲೂಕಿನಲ್ಲಿ 5,413 ವಿದ್ಯಾರ್ಥಿಗಳು ಹಾಜರಾಗಿ 170 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಯಚೂರು ತಾಲ್ಲೂಕಿನಲ್ಲಿ 9,110 ಹಾಜರಾಗಿದ್ದು, 215 ವಿದ್ಯಾರ್ಥಿಗಳು ಗೈರಾಗಿದ್ದಾರೆ ಹಾಗೂ ಸಿಂಧನೂರು ತಾಲ್ಲೂಕಿನಲ್ಲಿ 5,597 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 87 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
