ರಾಯಚೂರು ಮಾರ್ಚ್ 18 (ಕರ್ನಾಟಕ ವಾರ್ತೆ): ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವಾರ್ತಾ ಶಾಖೆ ಬೆಂಗಳೂರು ವತಿಯಿಂದ ರಾಯಚೂರಿನಲ್ಲಿ ಮಾರ್ಚ್ 25ರ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪತ್ರಕರ್ತರಿಗಾಗಿ ಒಂದು ದಿನದ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಅನುಷ್ಠಾನಗೊಂಡಿರುವ ಯೋಜನೆಗಳ ಕುರಿತು ಮಾಹಿತಿ ನೀಡುವುದು ಸೇರಿದಂತೆ ಸಂವಾದ ಏರ್ಪಡಿಸಲಾಗಿದ್ದು, ಪತ್ರಕರ್ತರು ಕಾರ್ಯಾಗಾರದಲ್ಲಿ ಭಾಗಿಯಾಗಿ, ಯಶಸ್ವಿಗೊಳಿಸಬೇಕೆಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವಾರ್ತಾ ಶಾಖೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *