ಲಿಂಗಸಗೂರು : ಮಾ 19 .

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ತಾಲೂಕಿನಲ್ಲಿ ಬುಧವಾರ ಶಾಂತಿಯುತವಾಗಿ ನಡೆದಿದೆ . ತಾಲೂಕಿನ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದ್ದು, 6255 ವಿದ್ಯಾರ್ಥಿಗಳ ಪೈಕಿ 6142 ವಿದ್ಯಾರ್ಥಿಗಳು ಹಾಜರಾಗಿದ್ದು
ಪರೀಕ್ಷೆಗೆ 113 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ , ಅದರಲ್ಲಿ 3185 ಜನ ವಿದ್ಯಾರ್ಥಿಗಳು ಹಾಗೂ 2952 ಜನ ವಿದ್ಯಾರ್ಥಿನಿಯರು ಹಾಜರಾಗಿ ಪರೀಕ್ಷೆ ಬರೆದರು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತುಬದ್ಧವಾಗಿ ಪರೀಕ್ಷೆ ನಡೆಸಲಾಗಿದ್ದು,
ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೂಕ್ತ ಭದ್ರತಾ ವ್ಯವಸ್ಥೆ ಒದಗಿಸಿದ್ದರು. ವಿದ್ಯಾರ್ಥಿಗಳು ಸಮಯಕ್ಕೆ ಮುನ್ನ ಕೇಂದ್ರಗಳಿಗೆ ಆಗಮಿಸಿ ಪರಿಶೀಲನೆಯ ನಂತರ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ಪಡೆದರು. ಪರೀಕ್ಷಾ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ಮೇಲ್ವಿಚಾರಕರು, ಮುಖ್ಯ ಅಧೀಕ್ಷಕರು ಹಾಗೂ ಸಿಬ್ಬಂದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರು. ಮುಂದಿನ ದಿನಗಳಲ್ಲಿಯೂ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *