ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಸಾಧನೆ ಮಾಡಿದ್ದು, ಒಟ್ಟು ₹4,30,000 ಮೌಲ್ಯದ 24 ಮೊಬೈಲ್‌ಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಿಂತಿರುಗಿಸಿದ್ದಾರೆ.ಸಿ‌.ಇ.ಐ.ಆರ್ (ಸೆಂಟ್ರಲ್ ಎಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್) ಪೋರ್ಟಲ್‌ನ ಸಹಾಯದಿಂದ ಕಳೆದುಹೋದ ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದೆ.ಈ ಕಾರ್ಯಾಚರಣೆ ಮೂಲಕ ಕಳೆದುಹೋದ ಮೊಬೈಲ್‌ಗಳನ್ನು ಮರಳಿ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪತ್ತೆಯಾದ ಮೊಬೈಲ್‌ಗಳನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮಾಲೀಕರಿಗೆ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು,’ಅಧಿಕಾರಿಗಳು, ಸಾರ್ವಜನಿಕರು ತಮ್ಮ ಮೊಬೈಲ್ ಕಳೆದುಹೋದ ಸಂದರ್ಭಗಳಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಬೇಕು. ಹಾಗೂ ಸಿಇಐಆರ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಬೇಕು’ ಎಂದು ಹೇಳಿದರು.

Leave a Reply

Your email address will not be published. Required fields are marked *