ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗಿ ಕರ್ನಾಟಕವು ‘ಮಿನಿ ಕಾಶ್ಮೀರ’ದಂತೆ ಭಾಸವಾಗಿತ್ತು. ಇದೀಗ ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಜನತೆಗೆ ಮತ್ತೊಂದು ಪ್ರಮುಖ ಎಚ್ಚರಿಕೆ ನೀಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಈ ಕೆಳಗಿನ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ (Orange Alert) ಘೋಷಿಸಲಾಗಿದೆ:ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ,ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು,ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ತುಮಕೂರು,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ.
ಮಳೆಯ ತೀವ್ರತೆ ಹೆಚ್ಚಿರುವ ಕಾರಣ ಸಾರ್ವಜನಿಕರು ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ಪಾಲಿಸಲು ಸೂಚಿಸಲಾಗಿದೆ:ಮಳೆ ಬರುವ ಮುನ್ಸೂಚನೆ ಕಂಡ ಕೂಡಲೇ ಜನರು ಸುರಕ್ಷಿತ ಕಟ್ಟಡಗಳ ಒಳಗೆ ಆಶ್ರಯ ಪಡೆಯಬೇಕು. ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು.ಕೊಯ್ಲು ಮಾಡಿದ ಬೆಳೆಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹಿಸಿಡಲು ಹಾಗೂ ಕೃಷಿ ಚಟುವಟಿಕೆಗಳ ವೇಳೆ ಹವಾಮಾನದ ಮೇಲೆ ನಿಗಾ ಇಡಲು ಕೋರಲಾಗಿದೆ.ಭಾರೀ ಮಳೆಯಿಂದಾಗಿ ರಸ್ತೆಗಳು ಜಾರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಜಾಗರೂಕತೆಯಿಂದ ಚಲಿಸಬೇಕು. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಂಭವವಿರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕು.ಯಾವುದೇ ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಅಥವಾ 112 ಸಂಖ್ಯೆಗೆ ಕರೆ ಮಾಡಿ ನೆರವು ಪಡೆಯಬಹುದು.

