ಸಮುದಾಯದವರಿಗೆ ಶುಭಾಶಯ ಕೋರಿದ ನಾಯಕರು ಸಾಮರಸ್ಯದ ಸಂದೇಶ ನೀಡಿದ ಹಬ್ಬದ ಸಂಭ್ರಮ

ಮಾನ್ವಿ : ಪಟ್ಟಣದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯದವರು ಭಕ್ತಿಭಾವದಿಂದ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು. ಹಬ್ಬದ ಹಿನ್ನೆಲೆಯಲ್ಲಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂತೋಷವನ್ನು ಹಂಚಿಕೊಂಡರು.
ಹಬ್ಬದ ಸಂದರ್ಭದಲ್ಲಿ ಶಾಸಕ ಹಂಪಯ್ಯ ನಾಯಕ, ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅಬ್ದುಲ್ ಗಾಪೂರ್ ಸಾಬ್ ಸೇರಿದಂತೆ ಮುಖಂಡರು ಸಮುದಾಯದವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ರಾಜಾ ಸುಭಾಷಚಂದ್ರ ನಾಯಕ, ಬಾಲಸ್ವಾಮಿ ಕೊಡ್ಲಿ, ಮಹಾಂತೇಶ ಸ್ವಾಮಿ ರೌಡೂರು, ಸತ್ತರ್ ಬಂಗ್ಲೆವಾಲೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *