ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ತೇವಾಂಶ ಭರಿತ ಮೋಡಗಳ ಪ್ರಭಾವದಿಂದಾಗಿ ಕರ್ನಾಟಕದ ಹಲವೆಡೆ ಮಾರ್ಚ್ 29ರವರೆಗೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವರ್ಷಧಾರೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಯಚೂರು, ವಿಜಯಪುರ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬಿಸಿಲಿನ ಝಳದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಮಳೆಯ ಮುನ್ಸೂಚನೆಯು ತಂಪಿನ ವಾತಾವರಣ ತಂದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದೆ.
ಕಲಬುರಗಿ: 5.9 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ ಕಂಡಿದೆ.
ಬೆಳಗಾವಿ, ಬೀದರ್, ಚಿತ್ರದುರ್ಗ, ಧಾರವಾಡ, ಮಂಡ್ಯ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ 2.5 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಇಳಿಮುಖವಾಗಿದೆ.
ಮುಂದಿನ ಐದು ದಿನಗಳ ಕಾಲ ರಾಜ್ಯದ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳು ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ- ಹವಾಮಾನ ಇಲಾಖೆ ವರದಿ

Leave a Reply

Your email address will not be published. Required fields are marked *