ಮಾನ್ವಿ, -ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ವತಿಯಿಂದ ಜ್ಞಾನಪ್ರಕಾಶ ಸ್ವಾಮೀಜಿರವರ ನೇತೃತ್ವದಲ್ಲಿ ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ ಮತ್ತು ಹಳೆ ಮೀಸಲಾತಿ ನಿಯಮದಂತೆ ತ್ವರಿತ ನೇಮಕಾತಿಗೆ ಆಗ್ರಹಿಸಿ. ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾ.25 ರಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಮುದಾಯದ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಅಧ್ಯಕ್ಷರು ಬಂಡೆಗಳು ಕರೆಗುಡ್ಡ ನೀಡಿದ್ದಾರೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಅವೈಜ್ಞಾನಿಕ ಒಳಮೀಸಲಾತಿ ಹಾಗೂ ರೋಸ್ಟರ್ ಪದ್ಧತಿ ಜಾರಿ ಮಾಡಿದ್ದು ಈ ಅನ್ಯಾಯ ಸರಿಪಡಿಸಲು ಆಗ್ರಹಿಸಿ ಈ ಸಮಾವೇಶ ಆಯೋಜಿಸಿದ್ದು ನಮ್ಮ ಸಮುದಾಯಗಳ ಪ್ರತಿ ಮನೆಯಿಂದ ಒಬ್ಬ ಸದಸ್ಯ ಭಾಗವಹಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ
ಪತ್ರಿಕೆ ಪ್ರಕಟಣೆ

